ಸಾರಾಂಶ
ಕಳೆದ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟ್ಟಿತ್ತು. ನಮ್ಮ ಹೋರಾಟದ ನಂತರ ಹಿಂಪಡೆಯಿತು. ಈಗಿರುವ ಕಾಂಗ್ರೆಸ್ ಸರ್ಕಾರ 6000ಕ್ಕೂ ಹೆಚ್ಚು ಶಾಲೆ ಮುಚ್ಚಲು ಮುಂದಾಗುತ್ತಿದೆ.
ಗಂಗಾವತಿ:
ಸಂಯೋಜನೆ ಹೆಸರಿನಲ್ಲಿ 6200 ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣದ ಸಮೀಪದಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯಿತು.ಈ ವೇಳೆ ಮಾತನಾಡಿದ ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ರವಿಕಿರಣ್, ದೇಶದಲ್ಲಿ ಸಾವಿತ್ರಿಭಾಯಿ ಫುಲೆ, ಜ್ಯೋತಿರಾವ್ ಫುಲೆ, ವಿದ್ಯಾಸಾಗರ ಅವರಂತಹ ಮಹನೀಯರು ಎಲ್ಲರಿಗೂ ಶಿಕ್ಷಣ ಸಿಗಬೇಕೆಂದು ಹೋರಾಡಿದ್ದಾರೆ. ಅದೇ ರೀತಿ ಸ್ವಾತಂತ್ರ ಹೋರಾಟಗಾರರಾದ ಭಗತ್ ಸಿಂಗ್, ನೇತಾಜಿಯಂತ ಕ್ರಾಂತಿಕಾರಿಗಳು ಕನಸು ಕೂಡ ಎಲ್ಲರಿಗೂ ಉಚಿತವಾಗಿ ಶಿಕ್ಷಣ ದೊರೆಯಬೇಕೆಂಬುದು ಆಗಿದೆ. ಆದರೆ, ಸ್ವಾತಂತ್ರ್ಯ ನಂತರ ಅಧಿಕಾರಕ್ಕೆ ಬಂದ ಪಕ್ಷಗಳು ಶಿಕ್ಷಣವನ್ನು ಖಾಸಗೀಕರಣ ಮಾಡಲು ಮುಂದಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಬಿಜೆಪಿ ಸರ್ಕಾರ 13,800 ಸರ್ಕಾರಿ ಶಾಲೆ ಮುಚ್ಚಲು ಹೊರಟ್ಟಿತ್ತು. ನಮ್ಮ ಹೋರಾಟದ ನಂತರ ಹಿಂಪಡೆಯಿತು. ಈಗಿರುವ ಕಾಂಗ್ರೆಸ್ ಸರ್ಕಾರ 6000ಕ್ಕೂ ಹೆಚ್ಚು ಶಾಲೆ ಮುಚ್ಚಲು ಮುಂದಾಗುತ್ತಿದೆ, ಇದನ್ನು ವಿರೋಧಿಸಿ 50 ಲಕ್ಷ ಸಹಿ ಸಂಗ್ರಹ ನಡೆಯುತ್ತಿದ್ದು ರಾಜ್ಯಾದ್ಯಂತ ಪೋಷಕರು ನಮ್ಮೊಟ್ಟಿಗೆ ನಡೆಸುತ್ತಿದ್ದಾರೆ ಎಂದರು.ಜಿಲ್ಲಾ ಸಂಚಾಲಕರಾದ ಗಂಗರಾಜ ಅಳ್ಳಳ್ಳಿ, ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಸಿಂಧು ಕೆ, ಕಾರ್ಯಕರ್ತರಾದ ಸದಾಶಿವ, ಬಾಬು, ದೀಪ, ದುರ್ಗಮ್ಮ, ದೇವಮ್ಮ, ರಮೇಶ, ಲಕ್ಷ್ಮಣ, ಶಾಂತಮ್ಮ, ರುದ್ರೇಶ, ಹುಲ್ಲೇಶ, ಮಲ್ಲೇಶ ಮತ್ತು ಆಕಾಶ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))