ಸಾರಾಂಶ
ಹುಬ್ಬಳ್ಳಿಯ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ಮಾಜಿ ಸಚಿವ ಹಾಲಪ್ಪ ಆಚಾರ
ಕನ್ನಡಪ್ರಭ ವಾರ್ತೆ ಯಲಬುರ್ಗಾಹುಬ್ಬಳ್ಳಿಯ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೌನ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವ ಹಾಲಪ್ಪ ಆಚಾರ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಮಹಿಳೆಯರಿಗೆ ನೆಮ್ಮೆದಿ ಇಲ್ಲದಂತಾಗಿದೆ. ರಾಜ್ಯದಲ್ಲೆಡೆ ಕಳೆದ ಐದಾರು ದಿನಗಳಲ್ಲಿ ಬರೀ ಅತ್ಯಾಚಾರ, ಅನಾಚಾರ, ಕೊಲೆ ಪ್ರಕರಣಗಳೆ ಹೆಚ್ಚಾಗಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ದುರಾಡಳಿತವೇ ಕಾರಣವಾಗಿದೆ. ವಿದ್ಯಾರ್ಥಿನಿಯನ್ನು ಹಾಡುಹಗಲೇ ಕೊಲೆ ಮಾಡಿರುವುದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಮಾಡಿರುವುದು ವಿಕೃತ ಮನಸ್ಸಿನ ಹೇಯ ಕೃತ್ಯ. ಇಂತಹವರಿಗೆ ಕಠಿಣ ಶಿಕ್ಷೆಯಾಗಬೇಕು. ಕೂಡಲೇ ರಾಜ್ಯದ ಮುಖಮಂತ್ರಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.ಕೊಪ್ಪಳ ಲೋಕಸಭಾ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್ ಮಾತನಾಡಿ, ವಿದ್ಯಾರ್ಥಿನಿ ನೇಹಾ ಕೊಲೆಗೈದ ಹಂತಕನಿಗೆ ತಕ್ಕ ಶಿಕ್ಷೆಯಾಗಬೇಕು. ಇಂತಹ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಮುಖಂಡರಾದ ಬಸಲಿಂಗಪ್ಪ ಭೂತೆ, ಸಿ.ಎಚ್. ಪಾಟೀಲ, ಅಮರೇಶ ಹುಬ್ಬಳ್ಳಿ, ವೀರಣ್ಣ ಹುಬ್ಬಳ್ಳಿ, ವಸಂತ ಭಾವಿಮನಿ, ಕುಮಾರಗೌಡ ಪಾಟೀಲ, ಬಸನಗೌಡ ತೊಂಡಿಹಾಳ, ಎಸ್.ಎನ್. ಶ್ಯಾಗೋಟಿ, ಶಂಕರಗೌಡ, ಸಿದ್ರಾಮೇಶ ಬೇಲೇರಿ, ಕಳಕಪ್ಪ ತಳವಾರ, ಈರಪ್ಪ ಬಣಕಾರ, ಕಲ್ಲೇಶ ಕರಮುಡಿ, ಸುರೇಶ ಹೊಸಳ್ಳಿ ಸೇರಿದಂತೆ ಮತ್ತಿತರರು ಇದ್ದರು.