ಸಾರಾಂಶ
ಕರಾವಳಿಯಲ್ಲಿ ಮೀನುಗಾರಿಕೆ, ಕೃಷಿ ಸಂಸ್ಕರಣೆ ಮತ್ತು ಸಾಗರ ರಪ್ತುಗಳಿಗೆ ಅಗತ್ಯ ನೀತಿ ರೂಪಿಸಲು, ಕೈಗಾರಿಕಾ ಕಾರಿಡಾರ್‌ಗಳನ್ನು ಬಲಪಡಿಸಲು, ಪ್ರವಾಸೋದ್ಯಮ ಮೂಲ ಸೌರ್ಕಯವನ್ನು ಹೆಚ್ಚಿಸಲು, ಉತ್ತಮ ರಸ್ತೆ ಜಾಲಗಳು, ವಿಮಾನ ನಿಲ್ದಾಣ ಮತ್ತು ರೈಲು ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಶೀಘ್ರವೇ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಅದೇ ರೀತಿ ಕೈಗಾರಿಕಾ ನೀತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸರಳೀಕರಣ ಮಾಡುವ ಕುರಿತು ಪ್ರಯತ್ನ ಮಾಡಲಾಗುವುದು ಎಂದು ಎಂ.ಜಿ. ಬಾಲಕೃಷ್ಣ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಣಿಪಾಲ
ಸ್ಥಳೀಯ ಯುವಜನತೆಯ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗಾಗಿ ಸಿಲಿಕಾನ್ ಸರ್ಫ್ - 25 ಎಂಬ ಪರಿಕಲ್ಪನೆಯನ್ನು ಹುಟ್ಟು ಹಾಕಲಾಗಿದೆ. ಈ ಮೂಲಕ ಎಐ - ಫಿನ್ಟೆಕ್, ಇ ಕಾಮರ್ಸ್ ಮತ್ತು ಡಿಜಿಟಲ್ ಸೇವೆಗಳತ್ತ ಗಮನ ಹರಿಸುವುದು, ಐಟಿ ಪಾರ್ಕ್ ಸ್ಥಾಪನೆ, ಟೆಕ್ ಸ್ಟಾರ್ಟ್ ಅಪ್ ಗಳನ್ನು ಆಕರ್ಷಿಸುವುದು ಉದ್ದೇಶವಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ತಿಳಿಸಿದ್ದಾರೆ.ಅವರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿಯಲ್ಲಿ ಮೀನುಗಾರಿಕೆ, ಕೃಷಿ ಸಂಸ್ಕರಣೆ ಮತ್ತು ಸಾಗರ ರಪ್ತುಗಳಿಗೆ ಅಗತ್ಯ ನೀತಿ ರೂಪಿಸಲು, ಕೈಗಾರಿಕಾ ಕಾರಿಡಾರ್‌ಗಳನ್ನು ಬಲಪಡಿಸಲು, ಪ್ರವಾಸೋದ್ಯಮ ಮೂಲ ಸೌರ್ಕಯವನ್ನು ಹೆಚ್ಚಿಸಲು, ಉತ್ತಮ ರಸ್ತೆ ಜಾಲಗಳು, ವಿಮಾನ ನಿಲ್ದಾಣ ಮತ್ತು ರೈಲು ಸಂಪರ್ಕಗಳನ್ನು ಅಭಿವೃದ್ಧಿಪಡಿಸಲು ಶೀಘ್ರವೇ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಅದೇ ರೀತಿ ಕೈಗಾರಿಕಾ ನೀತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸರಳೀಕರಣ ಮಾಡುವ ಕುರಿತು ಪ್ರಯತ್ನ ಮಾಡಲಾಗುವುದು ಎಂದು ನುಡಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಮಹಾಸಂಸ್ಥೆಯ ಉಪಾಧ್ಯಕ್ಷೆ ಉಮಾ ರೆಡ್ಡಿ, ನಿಕಟಪೂರ್ವ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ, ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್, ಕಾರ್ಯದರ್ಶಿ ಡಾ.ವಿಜಯೇಂದ್ರ ರಾವ್, ಜಿಲ್ಲಾ ಸಮನ್ವಯ ಸಮಿತಿ ಚೇಯರ್‌ಮೆನ್ ಅಂಡಾರು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.ಬಾಕ್ಸ್‘ಕರಾವಳಿಗೆ ವಿಶೇಷ ನೀತಿ ಅಗತ್ಯ’ಉಡುಪಿ ಜಿಲ್ಲೆಯಲ್ಲಿ 10,000 ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿವೆ. ಜಿಲ್ಲೆಯಲ್ಲಿ 9 ಮೀನು ಸಂಸ್ಕರಣಾ ಘಟಕಗಳಿವೆ. ಇನ್ನೂ ಹೆಚ್ಚು ಮೀನು ಸಂಸ್ಕರಣಾ ಘಟಕಕ್ಕೆ ಅವಕಾಶಗಳಿವೆ. ಇದಕ್ಕೆ ಜಿಲ್ಲೆಯ ಸಮುದ್ರ ತೀರದಲ್ಲಿ ಸಿಆರ್‌ಝೆಡ್ ರಿಯಾಯಿತಿಯೊಂದಿಗೆ 500 ಎಕರೆ ಜಾಗವನ್ನು ಗುರುತಿಸುವ ವಿಶೇಷ ನೀತಿಯ ಅಗತ್ಯ ಇದೆ. ಇದರಿಂದ ಉದ್ಯೋಗಾವಕಾಶ ಹೆಚ್ಚುತ್ತದೆ ಎಂದು ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್ ತಿಳಿಸಿದರು.ಜಿಲ್ಲೆಯ ನಂದಿಕೂರು, ಬೆಳಪು, ಮಿಯ್ಯರು ಮತ್ತು ಕಾರ್ಕಳದಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಒಟ್ಟು 264 ಎಕರೆ ಕೈಗಾರಿಕಾ ಭೂಮಿ ಇದೆ. ಕಾರ್ಕಳದ ನಿಟ್ಟೆ, ಹೆಬ್ರಿಯ ಶಿವಪುರದಲ್ಲಿ ಹೊಸ ಕೈಗಾರಿಕಾ ಪ್ರದೇಶವನ್ನು ಗುರುತಿಸಲಾಗಿದೆ. ಯುಪಿಸಿಎಲ್ ಎರಡನೇ ಹಂತದ 530 ಎಕರೆ ಜಾಗವನ್ನು ಕೆಇಎಡಿಬಿ ವಾಪಾಸ್ಸು ಪಡೆದುಕೊಂಡಿದೆ. ಅದೇ ರೀತಿ 350 ಎಕರೆ ಖಾಸಗಿ ಜಾಗವನ್ನು ಗುರುತಿಸಲಾಗಿದೆ ಎಂದರು.