ಕಾರ್ಗಿಲ್ ವಿಜಯದ ರಜತ ಮಹೋತ್ಸವ

| Published : Jul 27 2024, 12:55 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಕಾರ್ಗಿಲ್ ಯುದ್ಧದ ವಿಜಯದ ದಿವಸ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಶೋಭಾ ಯಾತ್ರೆಗೆ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಘಟಕ, ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್, ಲಯನ್ಸ್ ಕ್ಲಬ್, ರೆಡ್‌ಕ್ರಾಸ್‌, ಶ್ರೇಯಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಗಿಲ್ ರಜತ ಮಹೋತ್ಸವ ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ:

ಕಾರ್ಗಿಲ್ ಯುದ್ಧದ ವಿಜಯದ ದಿವಸ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಶೋಭಾ ಯಾತ್ರೆಗೆ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಶುಕ್ರವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಘಟಕ, ರೋಟರಿ ಕ್ಲಬ್, ಇನ್ನರ್ ವ್ಹೀಲ್ ಕ್ಲಬ್, ಲಯನ್ಸ್ ಕ್ಲಬ್, ರೆಡ್‌ಕ್ರಾಸ್‌, ಶ್ರೇಯಾ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಕಾರ್ಗಿಲ್ ರಜತ ಮಹೋತ್ಸವ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾಡಳಿತ ಭವನದಿಂದ ಪ್ರಾರಂಭವಾದ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಡಾ.ಬಿ.ಆರ್.ಅಂಬೇಡ್ಕರ ಭವನಕ್ಕೆ ಮುಕ್ತಾಯಗೊಂಡಿತು.

ಶೋಭಾಯಾತ್ರೆಯಲ್ಲಿ ಭಾರತ ಮಾತೆ ಹಾಗೂ ಕಾರ್ಗಿಲ್ ಯೋಧರ ಭಾವಚಿತ್ರಗಳನ್ನು ಪ್ರದರ್ಶನ ಮಾಡಲಾಯಿತು. ಮಾಜಿ ಸೈನಿಕರು ಬೈಕ್‌ಗಳಿಗೆ ತ್ರಿವರ್ಣ ಧ್ವಜ ಕಟ್ಟಿಕೊಂಡು ಪಾಲ್ಗೊಂಡಿದ್ದರು. ಎನ್‌ಸಿಸಿ ಕೆಡೆಟ್, ಮಾಜಿ ಸೈನಿಕರ ಕುಟುಂಬಸ್ಥರು ಹಾಗೂ ಮಕ್ಕಳು ದೇಶಭಕ್ತಿಯ ವಿವಿಧ ವೇಶಗಳಲ್ಲಿ ಕಾಣಿಸಿಕೊಂಡರು.

ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಹಾಗೂ ಬಾಗಲಕೋಟೆ ಎನ್.ಸಿ.ಸಿ 37 ಬಟಾಲಿಯನ್‌ ಕಮಾಂಡಿಂಗ್ ಆಫೀಸರ್ ಸಂಜಯ ಕದಂಬ ಅವರು ಭಾರತ ಮಾತೆ ಹಾಗೂ ಕಾರ್ಗಿಲ್ ಯೋಧರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಯುದ್ಧದಲ್ಲಿ ಮೃತಪಟ್ಟ ಯೋಧರಿಗೆ ಮೌನ ಆಚರಿಸಲಾಯಿತು.ಶೋಭಾಯಾತ್ರೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷ ಅರ್ಜುನ ಕೋರಿ, ಅಧ್ಯಕ್ಷ ಗದಿಗೆಪ್ಪ ಅರಕೇರಿ ಸೇರಿದಂತೆ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರು ಮತ್ತು ಕುಟುಂಬಸ್ಥರು ಪಾಲ್ಗೊಂಡಿದ್ದರು.