22 ರಂದು ಕುರುಹಿನಶೆಟ್ಟಿ ಅರ್ಬನ್ ಸೊಸೈಟಿಯ ಬೆಳ್ಳಿ ಸಂಭ್ರಮ

| Published : Jan 15 2024, 01:50 AM IST / Updated: Jan 15 2024, 05:24 PM IST

ಸಾರಾಂಶ

ಮೂಡಲಗಿ ಪಟ್ಟಣದ ಸೊಸೈಟಿಯ ಸಭಾಗಂಣದಲ್ಲಿ ಭಾನುವಾರ ಸೊಸೈಟಿಯ ಬೆಳ್ಳಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯಲ್ಲಿ ಮಾಹಿತಿ ನೀಡಿದ ಸೊಸೈಟಿಯ ಅಧ್ಯಕ್ಷ ಬಸವಣ್ಣಿ ಚಿ.ಮುಗಳಖೋಡ.

ಕನ್ನಡಪ್ರಭ ವಾರ್ತೆ ಮೂಡಲಗಿ

ಪಟ್ಟಣದ ಪ್ರತಿಷ್ಠಿತ ಹಣಕಾಸಿನ ಸೊಸೈಟಿಗಳಲ್ಲಿ ಒಂದಾದ ಕುರುಹಿನಶೆಟ್ಟಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಬೆಳ್ಳಿ ಮಹೋತ್ಸವವು ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಜ.22ರಂದು ಮಧ್ಯಾಹ್ನ 4 ಗಂಟೆಗೆ ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಬಸವಣ್ಣಿ ಚಿ.ಮುಗಳಖೋಡ ಹೇಳಿದರು.

ಪಟ್ಟಣದ ಸೊಸೈಟಿಯ ಸಭಾಗಂಣದಲ್ಲಿ ಭಾನುವಾರ ಸೊಸೈಟಿಯ ಬೆಳ್ಳಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ ಅವರು, ಮೂಡಲಗಿ ಶಿವಬೋಧರಂಗ ಮಠದ ದತ್ತಾತ್ರೇಯಬೋಧ ಸ್ವಾಮಿಜಿಗಳು, ಹಳೇಹುಬ್ಬಳ್ಳಿ ವೀರಭಿಕ್ಷಾವರ್ತಿ ನೀಲಕಂಠಮಠದ ಶಿವಶಂಕರ ಮಹಾಸ್ವಾಮಿಗಳು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಶಿವಾನಂದ ಸ್ವಾಮಿಗಳು, ಸದಲಗಾ ಶಿವಾನಂದ ಗೀತಾಶ್ರಮದ ಶ್ರದ್ಧಾನಂದ ಮಹಾಸ್ವಾಮಿಗಳು ಸಮಾರಂಭದ ಸಾನ್ನಿಧ್ಯ ವಹಿಸುವರು ಎಂದರು.

ಸೊಸೈಟಿಯ ನಿರ್ದೇಶಕ ಸುಭಾಷ ಬೆಳಕೂಡ ಮಾತನಾಡಿ, ಸಂಸ್ಥೆಯ ಅಧ್ಯಕ್ಷ ಬಸವಣ್ಣಿ ಮುಗಳಖೋಡ ಅಧ್ಯಕ್ಷತೆ ವಹಿಸುವರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. 

ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಕುರುಹುಪಥ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು, ಮುಖ್ಯ ಅತಿಥಿಗಳಾಗಿ ಸಂಸದರಾದ ಮಂಗಲ ಅಂಗಡಿ, ಈರಣ್ಣ ಕಡಾಡಿ, ಮಾಜಿ ಸಚಿವ ಎ.ಬಿ.ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಕಲ್ಲೋಳಿಯ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಬಾಳಪ್ಪ ಬೆಳಕೂಡ ಹಾಗೂ ಇನ್ನೂ ಅನೇಕ ಗಣ್ಯರು ಆಗಮಿಸುವರು ಎಂದರು.

ಸೊಸೈಟಿಯ ಪ್ರಧಾನ ಕಾರ್ಯದರ್ಶಿ ರಮೇಶ ವಂಟಗೂಡಿ ಮಾತನಾಡಿ, ಸೊಸೈಯಿಟಿಯ ಬೆಳ್ಳಿ ಮಹೋತ್ಸವದ ದಿನದಂದು ಬೆಳಗ್ಗೆ 8 ಗಂಟೆಗೆ ಸೊಸೈಯಿಟಿಯಲ್ಲಿ ಮಹಾಲಕ್ಷ್ಮೀ ಪೂಜೆ ಹಾಗೂ ಗಣೇಶ ಮೂರ್ತಿ ಪ್ರತಿಸ್ಥಾಪನೆ ಮಾಡಲಾಗುವುದು. 

ಬೆಳ್ಳಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಜಾನಪದ ಕಲಾ ತಂಡದಿಂದ ಕಾರ್ಯಕ್ರಮ, ಮಧ್ಯಾಹ್ನ 2.30 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸೊಸೈಯಿಟಿಯಿಂದ ಎಸ್‌ಎಸ್‌ಆರ್ ಕಾಲೇಜ ಮೈದಾನವರೆಗೆ ಶ್ರೀಗಳ ಭವ್ಯ ಮೆರವಣಿಗೆ, ಸಂಜೆ 4 ಗಂಟೆಯಿಂದ ಬೆಳ್ಳಿ ಮಹೋತ್ಸವ ಕಾರ್ಯಕ್ರಮ ಮತ್ತು ಅಂದು ಸಂಜೆ 7 ಗಂಟೆಯಿಂದ ಖ್ಯಾತ ನಿರೂಪಿಕಿ ಅನುಶ್ರೀ ಹಾಗೂ ಖ್ಯಾತ ಹಿನ್ನೆಲೆ ಗಾಯಕರಾದ ಡಾ.ಶಮೀತಾ ಮಲ್ನಾಡ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮ ಜರುಗಲಿದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಲಕ್ಕಪ್ಪ ಪೂಜೇರಿ, ನಿರ್ದೇಶಕರಾದ ಇಸ್ಮಾಯಿಲ್ ಕಳ್ಳಿಮನಿ, ಗೊಡಚಪ್ಪ ಮುರಗೋಡ, ಬಸವರಾಜ ಬೆಳಕೂಡ, ವಿಶಾಲ ಶೀಲವಂತ, ಉಮಾ ಬೆಳಕೂಡ, ಶಾಂತವ್ವ ಬೊರಗಲ್, ಮಹಾಬೂಬಿ ಕಳ್ಳಿಮನಿ, ಮಾಲಾ ಬೆಳಕೂಡ, ಶ್ಯಾಲನ್ ಕೊಡತೆ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.