ಪೊಲೀಸ್‌ ಅಧಿಕಾರಿಗಳಿ ರಜತಮಹೋತ್ಸವ

| Published : Jul 30 2024, 12:30 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ 1999ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯವರು 25 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರಜತ ಮಹೋತ್ಸವ ಕಾರ್ಯಕ್ರಮದ ಸವಿನೆನಪಿಗಾಗಿ ಡಿಎಆರ್ ಘಟಕದಲ್ಲಿ ಚಿಲ್ಡ್ರನ್ ಪಾರ್ಕ್‌ ನಿರ್ಮಿಸುವುದಾಗಿ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ1999ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯವರು 25 ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ರಜತ ಮಹೋತ್ಸವ ಕಾರ್ಯಕ್ರಮದ ಸವಿನೆನಪಿಗಾಗಿ ಡಿಎಆರ್ ಘಟಕದಲ್ಲಿ ಚಿಲ್ಡ್ರನ್ ಪಾರ್ಕ್‌ ನಿರ್ಮಿಸುವುದಾಗಿ ಭರವಸೆ ನೀಡಿದರು.

ನಗರದಲ್ಲಿ ಆಯೋಜಿಸಲಾಗಿದ್ದ 1999ನೇ ಬ್ಯಾಚ್‌ನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು.ಚಿತ್ರದುರ್ಗ ಜಿಲ್ಲೆಯ ಐಮಂಗಲದ ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಅಧೀಕ್ಷಕರಾದ ಪಿ.ಪಾಪಣ್ಣ ಮಾತನಾಡಿ, 1999ನೇ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ತಮ್ಮ ಸವಿನೆನಪುಗಳನ್ನು ಹಂಚಿಕೊಂಡಿದಲ್ಲದೆ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಜಿಲ್ಲೆಯ ಪೊಲೀಸ್ ಅಧಿಕಾರಿಗಳಾದ ಪಂಪನಗೌಡ, ಪ್ರಭು, ಎಸ್.ಬಿ.ಪಾಟೀಲ, ಎಚ್.ಆರ್.ಪಾಟೀಲ್, ಆರ್.ಎಸ್.ಬಿರಾದಾರ, ಗುರುನಾಥ ಚವ್ಹಾಣ, ಶಿವಾನಂದ ಜೇವರಗಿ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.