ಸಾರಾಂಶ
ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.
ಸುರಪುರ : ತಾಲೂಕಿನಾದ್ಯಂತ ಲೋಕಾಸಭೆ ಮತ್ತು ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮುಂಬರುವ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಮ್ ಮತ್ತು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಗಳನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ ಹೇಳಿದರು.
ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಏ.5ರಂದು ಬಾಬು ಜಗಜೀವನರಾಂ ಮತ್ತು ಏ.14ರಂದು ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ತಹಸೀಲ್ದಾರ್ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಗುವುದು ಎಂದರು.
ಲೋಕಾಸಭಾ ಮತ್ತು ಉಪಚುನಾವಣೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತೆ ಸಂದರ್ಭದಲ್ಲಿ ಸರಕಾರಿ ಸಭೆ-ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ಸಭೆ-ಸಮಾರಂಭಗಳನ್ನು ನಡೆಸಲಾಗುವುದು. ಕಾರ್ಯಕ್ರಮ ನಡೆಸುವುದಿದ್ದರೆ ಮುಂಚಿತವಾಗಿ ಚುನಾವಣಾಧಿಕಾರಿಗಳಿಂದ ಪರವಾನಗಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಿಪಿಐ ಆನಂದ ವಾಗ್ಮೋಡೆ, ತಾ.ಪಂ. ಅಧಿಕಾರಿ ಬಸವರಾಜ, ಡಾ. ಆರ್.ವಿ. ನಾಯಕ, ಹಣಮಂತ್ರಾಯ ಪಾಟೀಲ್, ಭೀಮರಾಯ, ಮಂಜುನಾಥ ಶಿಡ್ಲಘಟ್ಟ, ಮಹೇಶ, ಮುಖಂಡರಾದ ನಿಂಗಣ್ಣ ಗೋನಾಲ, ತಿಪ್ಪಣ್ಣ ಶೆಳ್ಳಗಿ ಸೇರಿದಂತೆ ಇತರರಿದ್ದರು.