ಸಾರಾಂಶ
ಸಾಸಲು ಗ್ರಾಮದಲ್ಲಿ 3 ಕೋಟಿ ರು. ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ ನೆರವೇರಿಸಿದರು.
ಸಾಸಲು ಗ್ರಾಮದಲ್ಲಿ 3 ಕೋಟಿ ರು. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಅಧಿಕಾರ ಶಾಶ್ವತವಲ್ಲ. ಇರುವಷ್ಟು ದಿನ ಹತ್ತಾರು ಜನಕ್ಕೆ ಒಳ್ಳೆಯದು ಮಾಡಬೇಕೆನ್ನುವ ಉದ್ದೇಶದಿಂದ ನಿರ್ವಂಚನೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹಗಲು ರಾತ್ರಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.ತಾಲೂಕಿನ ಸಾಸಲು ಗ್ರಾಮದಲ್ಲಿ 3 ಕೋಟಿ ರು. ವೆಚ್ಚದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾಸಲು ಸರ್ಕಲ್‍ನಿಂದ ಹಿರೆಬೆನ್ನೂರು ಸರ್ಕಲ್‍ವರೆಗೆ 100 ಕೋಟಿ ರು. ವೆಚ್ಚದಲ್ಲಿ ಗುಣಮಟ್ಟದ ಸಿಸಿ ರಸ್ತೆ ಮಾಡಿಸಿದ್ದೇನೆ. ತಾಲೂಕಿನಾದ್ಯಂತ ಪ್ರತಿ ಹಳ್ಳಿಗಳಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವುದಕ್ಕಾಗಿ ಹಿರಿಯೂರಿನ ವಾಣಿ ವಿಲಾಸ ಸಾಗರದಿಂದ ನೀರು ತರಲು 367 ಕೋಟಿ ರು. ಗಳನ್ನು ಖರ್ಚು ಮಾಡಲಾಗಿದೆ. ಈಗಾಗಲೆ ಪೈಪ್‍ಲೈನ್ ಅಳವಡಿಸುವ ಕೆಲಸವಾಗಿದೆ. ರಾಜ್ಯದಲ್ಲಿ ಸರ್ಕಾರ ಯಾವುದಿದೆ ಎನ್ನುವುದು ಮುಖ್ಯವಲ್ಲ. ನಾನು ಕೇಳಿದಷ್ಟು ಅನುದಾನ ಸಿಗುತ್ತದೆ. ಇನ್ನು50 ವರ್ಷಗಳ ಕಾಲ ಹಾಳಾಗದಂತೆ ಉತ್ತಮ ರಸ್ತೆ ಮಾಡಿಸುತ್ತೇನೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಎಲ್ಲೆಲ್ಲಿ ಏನು ಕೆಲಸವಾಗಬೇಕು ಎನ್ನುವುದನ್ನು ಹುಡುಕಿ ಮಾಡುತ್ತಿದ್ದೇನೆ. ತಾಳಿಕಟ್ಟೆಯಲ್ಲಿ 32 ವರ್ಷಗಳ ನಂತರ ನಡೆಯುತ್ತಿರುವ ತೋಪು ಜಾತ್ರೆಗಾಗಿ ಮೂಲಭೂತ ಸೌಲಭ್ಯಗಳನ್ನು ಭಕ್ತರಿಗೆ ಕಲ್ಪಿಸುವುದಕ್ಕಾಗಿ 32 ಕೋಟಿ ರು. ಖರ್ಚು ಮಾಡಿದ್ದು, ಎಲ್ಲರನ್ನು ಸಮಾನವಾಗಿ ಕಾಣುತ್ತೇನೆ. ಯಾವುದೇ ತಾರತಮ್ಯ ಮಾಡುವುದಿಲ್ಲವೆಂದು ತಿಳಿಸಿದರು.ಈ ಸಂದರ್ಭದಲ್ಲಿ ಕುಮಾರಣ್ಣ, ದೇವರಾಜ್, ರಾಜಣ್ಣ, ವೆಂಕಟೇಶ್, ಚಂದ್ರಪ್ಪ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ, ದಿಗಂಬರ್ ಕಾಂಬ್ಳೆ ಹಾಗೂ ಗ್ರಾಮದ ಮುಖಂಡರು ಇದ್ದರು.