ಸಾರಾಂಶ
ಜನರ ಆಶೀರ್ವಾದ ಬಲದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನಗಳನ್ನು ತರುವ ಮೂಲಕ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ರೋಣ: ಜನರ ಆಶೀರ್ವಾದ ಬಲದಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೋಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನಗಳನ್ನು ತರುವ ಮೂಲಕ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು. ಅವರು ಸಮೀಪದ ಇಟಗಿ ಗ್ರಾಮದಲ್ಲಿ ಅಲ್ಪಸಂಖ್ಯಾತ ಇಲಾಖೆ ಗದಗ, ಜಿಲ್ಲಾ ಪಂಚಾಯಿತಿ ಮತ್ತು ವಕ್ಫ ಬೋರ್ಡ್ ಅನುದಾನದಡಿಯಲ್ಲಿ ಶಾದಿ ಮಹಲ್ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ನೆರವೇರಿಸಿ, ಬಳಿಕ ಜರುಗಿದ ಸಮಾರಂಭದಲ್ಲಿ ಮಾತನಾಡಿದರು.
ಬೆಲೆ ಏರಿಕೆಯ ದಿನಮಾನಗಳಲ್ಲಿ ಸಾಮಾನ್ಯ ಜನರು ಜೀವನ ನಡೆಸುವುದು ದುಸ್ತರವಾದ ಸಮಯದಲ್ಲಿ ವಿಧಾನಸಭೆ ಚುನಾವಣೆಗಳು ಬಂದವು, ಆ ಸಮಯದಲ್ಲಿ ಅಧಿಕಾರಕ್ಕೆ ಬಂದರೆ ದಿನನಿತ್ಯದ ಜೀವನಕ್ಕೆ ಅನುಕೂಲವಾಗುವ ಯೋಜನೆಗಳನ್ನು ರೂಪಿಸಲು ಸಂಕಲ್ಪ ಮಾಡಲಾಯಿತು. ಬಳಿಕ ಜನಾಶೀರ್ವಾದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ 5 ಗ್ಯಾರಂಟಿ ಯೋಜನಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗಿದ್ದು, ವಿಶೇಷವಾಗಿ ರೋಣ ಮತಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿ ಕಂಡಿವೆ. ಗ್ಯಾರಂಟಿ ಯಶಸ್ವಿ ಜಾರಿ ಜೊತೆಗೆ ಜನರಿಗೆ ಬೇಕಾದ ಮೂಲ ಸೌಕರ್ಯಗಳಿಗೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಲಾಗುವುದು ಎಂದರು. ಹಿಂದಿನ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿತ್ತು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಪುನಃ ಆ ಸ್ಥಗಿತಗೊಂಡ ಯೋಜನೆಗಳನ್ನು ಪ್ರಾರಂಭಿಸಲಾಯಿತು. ಈ ದಿಶೆಯಲ್ಲಿ ಇಟಗಿ ಗ್ರಾಮದಲ್ಲಿ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.ಸಾನಿಧ್ಯವನ್ನು ಇಟಗಿ ಧರ್ಮರ ಮಠದ ಷಣ್ಮುಕಪ್ಪಜ್ಜನವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಬಿ.ಎಂ.ದಂಡಿನ, ತಾಪಂ ಮಾಜಿ ಸದಸ್ಯ ಪ್ರಭು ಮೇಟಿ, ರೋಣ ಪುರಸಭೆ ಉಪಾಧ್ಯಕ್ಷ ಮಿಥುನ ಪಾಟೀಲ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಬಸವರಾಜ ನವಲಗುಂದ, ಮಲ್ಲಿಕಸಾಬ ಹೊರಪೇಟಿ, ಇಸ್ಮಾಯಿಲ್ ಹೊರಪೇಟಿ, ಯೂಸೂಫ ಇಟಗಿ, ಬಾಬು ಗೋಡೇಕರ, ಸುಭಾನಸಾಬ ಅರಗಿದ್ದಿ, ಶರೀಫ ದಲಾಯತ, ಎ .ಡಿ. ಕೋಲಕಾರ, ರಾಜು ಸಾಂಗ್ಲಿಕರ, ಮರ್ತುಜಾ ಡಾಲಾಯತ, ಖಾಸೀಂಸಾಬ್ ದೋಟಿಹಾಳ ಉಪಸ್ಥಿತರಿದ್ದರು.