ಸಿಂದೂರ ಪ್ರತೀಕಾರ: ಕರಾವಳಿಯ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

| Published : May 09 2025, 12:34 AM IST

ಸಿಂದೂರ ಪ್ರತೀಕಾರ: ಕರಾವಳಿಯ ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ಪಾಕಿಸ್ತಾನ ವಿರುದ್ಧ ಭಾರತದ ಸಿಂದೂರ ಪ್ರತೀಕಾರ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಹಾಗೂ ಯೋಧರ ಹೆಸರಿನಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕರಾವಳಿಯ ದೇವಸ್ಥಾನಗಳಲ್ಲಿ ಗುರುವಾರ ವಿಶೇಷ ಪೂಜೆ ನೆರವೇರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಪಾಕಿಸ್ತಾನ ವಿರುದ್ಧ ಭಾರತದ ಸಿಂದೂರ ಪ್ರತೀಕಾರ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಹಾಗೂ ಯೋಧರ ಹೆಸರಿನಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕರಾವಳಿಯ ದೇವಸ್ಥಾನಗಳಲ್ಲಿ ಗುರುವಾರ ವಿಶೇಷ ಪೂಜೆ ನೆರವೇರಿಸಲಾಯಿತು. ದ.ಕ. ಜಿಲ್ಲೆಯ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಮಾತ್ರವಲ್ಲದೆ ಇತರೆ ದೇವಸ್ಥಾನಗಳಲ್ಲೂ ವಿಶೇಷ ಪೂಜೆ, ಪ್ರಾರ್ಥನೆ ನಡೆಸಲಾಯಿತು. ಮಂಗಳೂರಿನ ಕದ್ರಿ, ಕುದ್ರೋಳಿ ದೇವಸ್ಥಾನಗಳಲ್ಲೂ ವಿಶೇಷ ಪೂಜೆ ನೆರವೇರಿತು.

ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಸೇರಿದಂತೆ ದ.ಕ.ಜಿಲ್ಲೆಯಾದ್ಯಂತ ಎಲ್ಲ ದೇವಸ್ಥಾನ, ಮಠ, ಮಂದಿರಗಳಲ್ಲಿ ಯೋಧರ ಒಳಿತು ಹಾಗೂ ಶ್ರೇಯಸ್ಸಿಗೆ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಲಾಯಿತು. ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳಲ್ಲದೆ, ರಾಜಕೀಯ ಪಕ್ಷಗಳು, ಸಂಘಸಂಸ್ಥೆಗಳ ಮುಖಂಡರು ಕೂಡ ದೇವಸ್ಥಾನ, ದೈವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ನೆರವೇರಿಸಿದರು.

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.