ಸಾರಾಂಶ
ಹೊಸಹೊಳಲು ಗ್ರಾಮದ ದೇವಾಲಯದಲ್ಲಿ ಬೆಳಗ್ಗೆಯಂದಲೇ ವಿಶೇಷ ಪೂಜೆ ಸೇರಿದಂತೆ ಪ್ರಸಾದ ವಿನಿಯೋಗ, ಮಹಾಮಂಗಳಾರತಿ ನಡೆಸಲಾಯಿತು. ನಂತರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕುರಿ, ಕೋಳಿ, ಮೇಕೆಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಲಾಯಿತು.
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪುರಸಭೆ ವ್ಯಾಪ್ತಿಯ ಹೊಸಹೊಳಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀಸಿಂಗಮ್ಮ ದೇವಿ ಉತ್ಸವವು ಸಡಗರ ಸಂಭ್ರಮದಿಂದ ಜರುಗಿತು.ಗ್ರಾಮದ ದೇವಾಲಯದಲ್ಲಿ ಬೆಳಗ್ಗೆಯಂದಲೇ ವಿಶೇಷ ಪೂಜೆ ಸೇರಿದಂತೆ ಪ್ರಸಾದ ವಿನಿಯೋಗ, ಮಹಾಮಂಗಳಾರತಿ ನಡೆಸಲಾಯಿತು. ನಂತರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಕುರಿ, ಕೋಳಿ, ಮೇಕೆಗಳನ್ನು ಸಾವಿರಾರು ಸಂಖ್ಯೆಯಲ್ಲಿ ಕತ್ತರಿಸಿ ದೇವರಿಗೆ ಅರ್ಪಣೆ ಮಾಡಲಾಯಿತು.
ರಾತ್ರಿ 7.30 ಗಂಟೆಗೆ ದೇವರ ವಿಗ್ರಹ ಮೂರ್ತಿಯನ್ನು ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮೆರವಣಿಗೆಯಲ್ಲಿ ಕೋಲಾಟ, ಡೊಳ್ಳು ಕುಣಿತ, ಪೂಜಾ ಕುಣಿತ, ವಾದ್ಯಗೋಷ್ಠಿ, ಪಟಾಕಿ ಸಿಡಿಸಿ ಯುವಕರು, ಹಿರಿಯರು ಸಂತಸ ಪಟ್ಟರು. ಗ್ರಾಮದ ಪ್ರಮುಖ ರಸ್ತೆಯಲ್ಲಿ ತಳಿರು ತೋರಣಗಳ್ಳನ್ನು ಕಟ್ಟಿ, ಜಗಮಗಿಸುವ ವಿದ್ಯುತ್ ದೀಪಾಲಂಕಾರಗಳನ್ನು ಅಳವಡಿಸಿದ್ದರಿಂದ ಇಡೀ ಗ್ರಾಮ ನವ ವಧುವಿನಂತೆ ಸಿಂಗಾರ ಮಾಡಲಾಗಿತ್ತು.ರಾಜ್ಯದ ಮೂಲೆ ಮೂಲೆಗಳಿಂದಲೂ ಭಕ್ತಾದಿಗಳು ಪಾಲ್ಗೊಂಡು ಸರದಿ ಸಾಲಿನಲ್ಲಿ ನಿಂತು ಪೂಜೆ ಸಲ್ಲಿಸಿದರು.ಪ್ರಮುಖ ರಸ್ತೆಯಲ್ಲಿ ಸಾಗುವ ಉತ್ಸವಕ್ಕೆ ಗ್ರಾಮಸ್ಥರು ಕರ್ಪೂರ ಹಚ್ಚಿದರೆ ಇನ್ನು ಕೆಲವರು ತಮ್ಮ ಹರಕೆ ಗಳನ್ನು ತೀರಿಸಿದರು. ಗ್ರಾಮದ ಮುಖಂಡರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಪಾಲ್ಗೊಂಡು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸಂತಸ ವ್ಯಕ್ತ ಪಡಿಸಿದರು. ಪಟ್ಟಣ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಸೆ.13 ರಂದು ಸರ್ವ ಸದಸ್ಯರ ಮಹಾಸಭೆನಾಗಮಂಗಲ:
ತಾಲೂಕು ಸರ್ಕಾರಿ ನೌಕರರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆ.13ರಂದು ಮಧ್ಯಾಹ್ನ 12.30ಕ್ಕೆ ಪಟ್ಟಣದ ಶಿಕ್ಷಕರ ಭವನದಲ್ಲಿ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯುವ ಮಹಾಸಭೆಯಲ್ಲಿ ರಾಜ್ಯ ಸಂಘದ ಹಿರಿಯ ಉಪಾಧ್ಯಕ್ಷ ಎಸ್.ಶಂಭೂಗೌಡ, ಜಿಲ್ಲಾಧ್ಯಕ್ಷ ಕೆ.ನಾಗೇಶ್ ಸೇರಿದಂತೆ ರಾಜ್ಯ, ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು, ನಿರ್ದೇಶಕರು, ನಾಮನಿರ್ದೇಶಿತ ಸದಸ್ಯರು, ವೃಂದ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಎಲ್ಲಾ ಇಲಾಖೆಗಳ ಸಿಬ್ಬಂದಿ ಪಾಲ್ಗೊಳ್ಳುವರು ಎಂದು ಸಂಘದ ಕಾರ್ಯದರ್ಶಿ ಡಿ.ಕೆ.ವಿನಯ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.15 ರಂದು ಜಮಾಬಂದಿ ಕಾರ್ಯಕ್ರಮ
ಮಂಡ್ಯ: ತಾಲೂಕಿನ ಮಾರಗೌಡನಹಳ್ಳಿ ಗ್ರಾಮ ಪಂಚಾಯಿತಿ ಜಮಾಬಂದಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 15 ರಂದು ಬೆಳಗ್ಗೆ ಪಂಚಾಯಿತಿ ಕಚೇರಿಯ ಆವರಣದಲ್ಲಿ ಏರ್ಪಡಿಸಲಾಗಿದೆ. ಜಮಾಬಂದಿ ನೋಡಲ್ ಅಧಿಕಾರಿ ಮತ್ತು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ಅಧ್ಯಕ್ಷತೆಯಲ್ಲಿ ತಾಂತ್ರಿಕ ಪರಿಶೀಲನೆ ಸ 2024-25ನೇ ಸಾಲಿನ ಜಮಾಖರ್ಚುನ್ನು ಪರಿಶೀಲಿಸಲಾಗುವುದು, ಗ್ರಾಪಂನ ಎಲ್ಲಾ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಗ್ರಾಪಂ ವ್ಯಾಪ್ತಿ ಗ್ರಾಮಗಳ ಗ್ರಾಮಸ್ಥರು ವಿವಿಧ ಸಂಘ- ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸುವಂತೆ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಕೋರಿದ್ದಾರೆ.