ಸದ್ಗುರು ಶ್ರೀಸಿದ್ಧಾರೂಢಸ್ವಾಮಿ ಮಠಕ್ಕೆ ಸೋಮವಾರ ಖ್ಯಾತ ಗಾಯಕ ಸೋನು ನಿಗಮ್ ಭೇಟಿ ನೀಡಿ ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಗದ್ದುಗೆಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಹುಬ್ಬಳ್ಳಿ:
ಇಲ್ಲಿನ ಸದ್ಗುರು ಶ್ರೀಸಿದ್ಧಾರೂಢಸ್ವಾಮಿ ಮಠಕ್ಕೆ ಸೋಮವಾರ ಖ್ಯಾತ ಗಾಯಕ ಸೋನು ನಿಗಮ್ ಭೇಟಿ ನೀಡಿ ಶ್ರೀ ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಗದ್ದುಗೆಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಶ್ರೀಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ್ ಕಮಿಟಿ ಅಧ್ಯಕ್ಷರು ಹಾಗೂ ಸದಸ್ಯರನ್ನು ಭೇಟಿಯಾಗಿ ಕೆಲಕಾಲ ಚರ್ಚಿಸಿ ಶ್ರೀಮಠದ ಮಾಹಿತಿ ಪಡೆದುಕೊಂಡರು. ಈ ವೇಳೆ ಸೋನು ನಿಗಮ್ ಅವರಿಗೆ ಶ್ರೀಮಠದ ಟ್ರಸ್ಟ್ ಕಮಿಟಿಯಿಂದ ಶ್ರೀ ಸಿದ್ಧಾರೂಢರ ಮೂರ್ತಿ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮಿಟಿ ಚೇರಮನ್ ಚನ್ನವೀರ ಮುಂಗರವಾಡಿ, ಧರ್ಮದರ್ಶಿ ಉದಯಕುಮಾರ ನಾಯಕ, ಶ್ರೀಮಠದ ಸಿಬ್ಬಂದಿ ವರ್ಗದವರು ಹಾಗೂ ಭಕ್ತರು ಪಾಲ್ಗೊಂಡಿದ್ದರು.