ಸಾರಾಂಶ
ಡಾ. ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಜೆಎಲ್ ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾದಲ್ಲಿ ಪಾತಿ ಫೌಂಡೇಶನ್ ಸಾಹಸಸಿಂಹ ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ಅಂಗವಾಗಿ ಸಿಂಹದ ನೆನಪು ಎಂಬ ಶೀರ್ಷಿಕೆಯಲ್ಲಿ ಡಾ. ವಿಷ್ಣುವರ್ಧನ್ ನಟಿಸಿರುವ ಚಿತ್ರಗೀತೆಗಳ ಸಂಗೀತ ಸಂಜೆಯನ್ನು ಆಯೋಜಿಸಿತ್ತು.ವಿಷ್ಣುವರ್ಧನ್ ಅವರ 30 ಹೆಚ್ಚು ಹಾಡುಗಳನ್ನು ಹಿರಿಯ ಕಲಾವಿದ ಎ.ಡಿ. ಶ್ರೀನಿವಾಸ್ ತಂಡದವರು ಹಾಡಿ, ನೆರೆದಿದ್ದವರನ್ನು ರಂಜಿಸಿದರು. ಈ ಕಾರ್ಯಕ್ರಮವನ್ನು ಶ್ರೀ ಇಳೈ ಆಳ್ವಾರ್ ಸ್ವಾಮೀಜಿ ಉದ್ಘಾಟಿಸಿ, ಶುಭ ಕೋರಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮತನಾಡಿ, ಡಾ. ವಿಷ್ಣುವರ್ಧನ್ ಮಾನವೀಯ ಮೌಲ್ಯಗಳ ಹರಿಕಾರರಾಗಿ, ಉತ್ತಮ ನಟನೆಯ ಮೂಲಕ ಜನ ಮಾನಸದಲ್ಲಿ ಇನ್ನು ಅಚ್ಚ ಹಸಿರಾಗಿದ್ದಾರೆ ಎಂದು ಹೇಳಿದರು.ಪಾತಿ ಫೌಂಡೇಶನ್ ಅಧ್ಯಕ್ಷ ಎಂ.ಡಿ. ಪಾರ್ಥಸಾರಥಿ ಮಾತನಾಡಿ, ಡಾ. ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಅವರು ಸಿನಿಮಾಗಳ ಮೂಲಕ ಸಮಾಜಕ್ಕೆ ಹಲವು ಒಳ್ಳೆಯ ಸಂದೇಶಗಳನ್ನು ನೀಡಿದ್ದಾರೆ. ಅವುಗಳನ್ನು ಜನರು ಅಳವಡಿಸಿಕೊಳ್ಳಬೇಕು. ಒಮ್ಮೆ ಕೆಲಸದ ಒತ್ತಡ ಹೆಚ್ಚಾದಾಗ ಮನಸ್ಸಿನ ನೆಮ್ಮದಿಗೆ ಹಾಡು ಕೇಳಬೇಕು ಎಂದು ಸಲಹೆ ನೀಡಿದರು.
ಕಸಾಪ ಮಾಜಿ ಜಿಲ್ಲಾಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಸಮಾಜಸೇವಕ ಕೆ. ರಘುರಾಂ, ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ, ನಿರ್ದೇಶಕ ಶಿವಪ್ರಸಾದ್, ಅನಿಲ್ ಕುಮಾರ್, ಆನಂದ್, ಟಿ.ಎಸ್. ಅರುಣ್ ಮೊದಲಾದವರು ಇದ್ದರು.