ಸಾರಾಂಶ
ಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಕಾಲದಲ್ಲಿ ಬ್ರಿಟಿಷರಿಗೆ ಅಭಿವೃದ್ಧಿಯ ಪಾಠಗಳನ್ನು ಸರ್ ಎಂವಿ ಬೋಧಿಸಿದ್ದರು. ವಿಜ್ಞಾನ, ತಂತ್ರಜ್ಞಾನ, ನಗರ ನಿರ್ಮಾಣ, ಪ್ರವಾಹ ನಿರ್ವಹಣೆ, ಕೃಷಿ, ಶಿಕ್ಷಣ, ನೀರಾವರಿ, ಕೈಗಾರಿಕೆ, ಜಲಾಶಯಗಳ ನಿರ್ಮಾಣ ಯೋಜನೆಗಳನ್ನು ಜಾರಿಗೊಳಿಸಿ ಮೈಸೂರನ್ನು ಮಾದರಿ ರಾಜ್ಯವನ್ನಾಗಿಸಿದರು.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರಂತೆ ದುಡಿಯುವುದನ್ನು ಕಲಿಯುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಜಿಲ್ಲಾ ಕಸಪಾ ಅಧ್ಯಕ್ಷ ಡಾ. ಕೋಡಿರಂಗಪ್ಪ ಅಭಿಪ್ರಾಯಪಟ್ಟರು. ನಗರದ ಬೆಸ್ಟ್ ಪದವಿ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯನವರ 165 ನೇ ಜನ್ಮ ದಿನ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ಮೈಸೂರು ರಾಜ್ಯದ ದಿವಾನರಾಗಿದ್ದ ಅವರು ರಾಜ್ಯದ ಸವಾಂಗೀಣ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ್ದಾರೆ ಎಂದರೆ ಅತಿಶಯೋಕ್ತಿಯಲ್ಲ ಎಂದರು.ಮಾದರಿ ರಾಜ್ಯ ರೂಪಿಸಿದ ಸರ್ ಎಂವಿಬ್ರಿಟಿಷರು ನಮ್ಮನ್ನು ಆಳುತ್ತಿದ್ದ ಕಾಲದಲ್ಲಿ ಬ್ರಿಟಿಷರಿಗೆ ಅಭಿವೃದ್ಧಿಯ ಪಾಠಗಳನ್ನು ಸರ್ ಎಂವಿ ಬೋಧಿಸಿದ್ದರು. ವಿಜ್ಞಾನ, ತಂತ್ರಜ್ಞಾನ, ನಗರ ನಿರ್ಮಾಣ, ಪ್ರವಾಹ ನಿರ್ವಹಣೆ, ಕೃಷಿ, ಶಿಕ್ಷಣ, ನೀರಾವರಿ, ಕೈಗಾರಿಕೆ, ಜಲಾಶಯಗಳ ನಿರ್ಮಾಣ ಯೋಜನೆಗಳನ್ನು ಜಾರಿಗೊಳಿಸಿ ಮೈಸೂರನ್ನು ಮಾದರಿ ರಾಜ್ಯವಾಗಿ ರೂಪಿಸಿದ ಕೀರ್ತಿ ಸರ್. ಎಂ.ವಿ ಅವರಿಗೆ ಸಲ್ಲುತ್ತದೆ ಎಂದರು.
ಅಭಿವೃದ್ಧಿಗೆ ಅಜ್ಞಾನ ಶಾಪಕ್ರಿಯಾಶೀಲತೆ ಮತ್ತು ಸಮಯಪ್ರಜ್ಞೆಗೆ ಹೆಸರಾಗಿದ್ದ ಸರ್ ಎಂ.ವಿ ಅವರು ನಮ್ಮ ದೇಶದಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಅಭಿವೃದ್ಧಿಯನ್ನು ಕುರಿತು ನಮ್ಮ ದೇಶಕ್ಕಿರುವ ಶಾಪ ಎಂದರೆ ಜನರ ಅಜ್ಞಾನ ಮತ್ತು ಆಲಸ್ಯ. ಆದ್ದರಿಂದ ಪ್ರತಿ ನಾಗರಿಕನು ತನ್ನ ಅದೃಷ್ಟವನ್ನು ನಂಬದೇ ಕೆಲಸವನ್ನೇ ಪೂಜೆ ಎಂದು ಭಾವಿಸಬೇಕು ಎನ್ನುತ್ತಿದ್ದರು ಎಂದು ತಿಳಿಸಿದರು.ಸ್ಪರ್ಧೆ ವಿಜೇತರಿಗೆ ಬಹುಮಾನಇದೇ ವೇಳೆ ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತ ಪಿ.ಉಮಾಶಂಕರವರನ್ನು ಸನ್ಮಾನಿಸಲಾಯಿತು. ವಿಶ್ವೇಶ್ವರಯ್ಯನವರ ಜೀವನ ಮತ್ತು ಸಾಧನೆ ಕುರಿತ ಪ್ರಬಂಧ ರಚನಾ ಸ್ಪರ್ಧೆಯಲ್ಲಿ ಉತ್ತಮ ಸ್ಥಾನಗಳಿಸಿದ್ದ 10 ಜನ ವಿದ್ಯಾರ್ಥಿಗಳಿಗೆ ಪುಸ್ತಕ ಉಡುಗೊರೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ರಘುನಾಥ್, ತಾಲ್ಲೂಕು ಕಸಪಾ ಅಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಜಿಲ್ಲಾ ಗೌರವ ಕಾರ್ಯದರ್ಶಿ ಅಮೃತ್‌ಕುಮಾರ್, ಬೆಸ್ಟ್ ಪದವಿ ಕಾಲೇಜಿನ ಪ್ರೊ. ರಾಮಯ್ಯ, ರಮೇಶ್, ಕಸಾಪ ಪದಾಧಿಕಾರಿಗಳು ಇದ್ದರು.