- ಆ.14ರ ಸಂಜೆ 4ರವರೆಗೆ ಯಾದಗಿರಿ ಜಿಲ್ಲೆಯ ವರದಿ । ಜಿಲ್ಲೆಯಲ್ಲಿ ಶೇ.97.08%ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ ಕನ್ನಡಪ್ರಭ ವಾರ್ತೆ ಯಾದಗಿರಿ
ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆ ಆರಂಭವಾಗಿದ್ದು, ಯಾದಗಿರಿ ಜಿಲ್ಲೆಯಲ್ಲಿ ಬಿಎಲ್‍ಒ ಗಳ ಮೂಲಕ ಮನೆ-ಮನೆಗೆ ಭೇಟಿ ನೀಡಿ ಎಣಿಕೆ ನಮೂನೆ (ಎನುಮರೇಷನ್ ಫಾರಂ-ಇಎಫ್) ವಿತರಿಸುವ ಕಾರ್ಯವು ಚುರುಕಿನಿಂದ ಸಾಗುತ್ತಿದೆ. ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ಲಭ್ಯವಿರುವ ಅಧಿಕೃತ ಅಂಕಿಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಶೇ.97.08%ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ.ಮನೆ-ಮನೆಗೆ ಗಣತಿ ನಮೂನೆ ನೀಡುವುದು ಹಾಗೂ ಡಿಜಿಟೈಸೇಶನ್ ಕಾರ್ಯವು ಕಳೆದ ಜೂನ್ 30ರಿಂದ ಆರಂಭವಾಗಿದ್ದು, ಆಗಸ್ಟ್.17 ರವರೆಗೆ ನಡೆಯಲಿದೆ. ಜೂನ್ 16 ರ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಒಟ್ಟು 10,53,236 ಮತದಾರರು ದಾಖಲಾಗಿದ್ದಾರೆ.
ಜಿಲ್ಲೆಯ ಒಟ್ಟು 10,53,236 (100%) ಮತದಾರರಿಗೆ ಎಣಿಕೆ ನಮೂನೆಗಳನ್ನು (ಇಎಫ್) ಯಶಸ್ವಿಯಾಗಿ ವಿತರಿಸಲಾಗಿದ್ದು, ಈ ಪೈಕಿ 10,53,236 (100%) ನಮೂನೆಗಳನ್ನು ಈಗಾಗಲೇ ಡಿಜಿಟೈಸ್ ಮಾಡಲಾಗಿದೆ. ಉಳಿದಂತೆ 5,268 (0.50%) ಇಎಫ್‌ಗಳನ್ನು ಆನ್‍ಲೈನ್ ಮೂಲಕ ಸ್ವೀಕರಿಸಲಾಗಿದೆ.ಮನೆಮನೆ ಸಮೀಕ್ಷೆಯ ವೇಳೆ ಜಿಲ್ಲೆಯಲ್ಲಿ ಒಟ್ಟು 1,88,744 ಎಎಸ್‍ಡಿಡಿಓ ಮತದಾರರನ್ನು ಗುರುತಿಸಲಾಗಿದ್ದು, ಇದರಲ್ಲಿ ಗೈರು ಹಾಜರಾದವರು 17,276, ಶಾಶ್ವತವಾಗಿ ಸ್ಥಳಾಂತರಗೊಂಡವರು 1,16,480, ಮೃತ ಮತದಾರರು 29,037, ಈಗಾಗಲೇ ನೋಂದಾಯಿತರಾಗಿರುವವರು 22,459, ಇತರೆ 3,492 ಸೇರಿದ್ದಾರೆ.
ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಡಿಜಿಟೈಸೇಶನ್ ಕಾರ್ಯ ಪ್ರಗತಿಯಲ್ಲಿರುತ್ತದೆ. ಅದರಂತೆ ಶೋರಾಪೂರ ಶೇ. 100%, ಶಹಾಪೂರ ಶೇ.100%, ಯಾದಗಿರಿ ಶೇ. 100%, ಗುರುಮಟಕಲ್ ಶೇ. 100%, ವಡಗೇರಾ 100%, ಹುಣಸಗಿ ಶೇ. 100%. ಜಿಲ್ಲೆಯಲ್ಲಿ ಒಟ್ಟು 1,134 ಪಾರ್ಟ್‍ಗಳಲ್ಲಿ ಈ ಮಹತ್ವದ ಪ್ರಕ್ರಿಯೆ ನಡೆಯುತ್ತಿದ್ದು, ನಿಗದಿತ ಅವಧಿಯೊಳಗೆ ಸಂಪೂರ್ಣ ಡಿಜಿಟೈಸೇಶನ್ ಪ್ರಕ್ರಿಯೆಯನ್ನು ಮುಕ್ತಾಯಗೊಳಿಸಲು ಚುನಾವಣಾ ಅಧಿಕಾರಿಗಳ ತಂಡ ಶ್ರಮಿಸುತ್ತಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ರಾಹುಲ್ ತುಕಾರಾಮ ಪಾಂಡ್ವೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
14ವೈಡಿಆರ್2 : ಯಾದಗಿರಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ.---000---