ಸಾರಾಂಶ
ಸಿರಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದಿನಿಂದ ಆರಂಭಗೊಂಡ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಗ್ರಾಪಂ ಅಧ್ಯಕ್ಷೆ ಹಾಲಮ್ಮ ಉದ್ಘಾಟಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಮ್ಮ ತರಗತಿ ಕೋಠಡಿಗೆ ಚಾಲನೆ ಕನ್ನಡಪ್ರಭ ವಾರ್ತೆ ಸಿರಿಗೆರೆ
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಇಂಗ್ಲಿಷ್ ಮಾಧ್ಯಮ ವಿಭಾಗವನ್ನು ಆರಂಭಿಸಲಾಯಿತು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಮ್ಮ ಮಕ್ಕಳ ಜೊತೆಗೂಡಿ ಅವರು ತರಗತಿ ಕೊಠಡಿ ಉದ್ಘಾಟಿಸಿದರು.
ಈ ವೇಳೆ ಶಾಲಾ ಮುಖ್ಯ ಶಿಕ್ಷಕಿ ದಾಕ್ಷಾಯಣಮ್ಮ ಮಾತನಾಡಿ, ಚಿತ್ರದುರ್ಗ ತಾಲೂಕಿನ 34 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಿದ್ದು, ಒಂದನೆಯ ತರಗತಿ ಇಂಗ್ಲಿಷ್ ಮಾಧ್ಯಮ ತರಗತಿಗೆ ಇಂದಿನಿಂದ ವಿದ್ಯುಕ್ತವಾಗಿ ಆರಂಭಿಸುತ್ತಿದ್ದೇವೆ ಎಂದರು.ಈ ತರಗತಿಗಳಿಗೆ ಸೇರ ಬಯುಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಎಲ್ಲ ಮಕ್ಕಳಂತೆಯೇ ಇವರಿಗೂ ಬಿಸಿ ಊಟ, ಸಮವಸ್ತ್ರ, ಗ್ರಂಥಾಲಯ ವ್ಯವಸ್ಥೆ ಇರುತ್ತದೆ. ಜೊತೆಗೆ ಇಂಗ್ಲಿಷ್ ಮಾಧ್ಯಮ ಬೋಧಿಸಲು ಶಿಕ್ಷಕರು ಇದ್ದಾರೆ ಹಾಗೂ ಸ್ಮಾರ್ಟ್‌ಕ್ಲಾಸ್ ಸಿದ್ಧವಿದೆ. ಶಾಲೆಯಲ್ಲಿ ಇಂಟರ್ನೆಟ್ ಸೌಲಭ್ಯ ಮತ್ತು ಹಲವು ಕಂಪ್ಯೂಟರ್ ಇದ್ದು ಬೋಧನೆಗೆ ಬಳಸಿಕೊಳ್ಳಲಾಗುತ್ತಿದೆ ಎಂದರು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಟ್ರಾಕ್ಟರ್ ಮೆರವಣಿಗೆಯಲ್ಲಿ ಸಾಗಿದ ವಿದ್ಯಾರ್ಥಿಗಳು ಇಂಗ್ಲಿಷ್ ಮಾಧ್ಯಮ ತರಗತಿ ಆರಂಭವಾದ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡಿದರು.ಈ ವೇಳೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ಮಂಜುನಾಥ್, ಗ್ರಾಪಂ ಸದಸ್ಯರಾದ ಕೆ.ಬಿ.ಮೋಹನ್, ಎಂ.ಜಿ. ದೇವರಾಜ್, ಎಂ.ಈ.ಶ್ರೀಧರ್(ಸಿದ್ದೇಶ್), ಎಸ್‌ಡಿಎಂಸಿ ಉಪಾಧ್ಯಕ್ಷ ಅಲಗಜ್ಜೆರ ಮಂಜುನಾಥ್, ಸದಸ್ಯರು, ಶಾಲಾ ಶಿಕ್ಷಕರು ಭಾಗವಹಿಸಿದ್ದದರು.