ಡಿಕೆಸು ಪರ ಸಹೋದರಿ ಮಂಜುಳಾ ಮತಯಾಚನೆ

| Published : Apr 22 2024, 02:01 AM IST

ಸಾರಾಂಶ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಅವರ ಸಹೋದರಿ ಮಂಜುಳಾ ನಗರದ ಹಲವೆಡೆ ಭಾನುವಾರ ಮತಯಾಚನೆ ಮಾಡಿದರು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಅವರ ಸಹೋದರಿ ಮಂಜುಳಾ ನಗರದ ಹಲವೆಡೆ ಭಾನುವಾರ ಮತಯಾಚನೆ ಮಾಡಿದರು.

ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮಂಜುಳಾರವರು ಗಾಂಧಿನಗರ, ಶಾಂತಿ ಲಾಲ್ ಲೇಔಟ್, ಐಜೂರು ಸೇರಿದಂತೆ ಹಲವು ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಈ ವೇಳೆ ಮಾತನಾಡಿದ ಅವರು, ರಾಮನಗರ ಪಟ್ಟಣಕ್ಕೆ ಕೇವಲ 9 ತಿಂಗಳ ಅವಧಿಯಲ್ಲಿ 260 ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಇದರಿಂದ ನಗರದ ಎಲ್ಲಾ ವಾರ್ಡುಗಳ ರಸ್ತೆ, ಚರಂಡಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆ ನೀಗಲಿದೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಗ್ಯಾರೆಂಟಿ ಯೋಜನೆಗಳ ಬೆಂಬಲ ಕಾರಣ ಸುರೇಶ್ ಅವರ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕ್ರಿಯಾಶೀಲರಾದ ಡಿ.ಕೆ.ಸುರೇಶ್ ತಾವು ಸಂಸದರು ಎಂಬುದನ್ನು ಮರೆತು ಪಂಚಾಯಿತಿ ಸದಸ್ಯನಂತೆ ಕೆಲಸ ಮಾಡಿದ್ದಾರೆ. ಆದ್ದರಿಂದಲೇ ಸುರೇಶ್ ರವರು ಮಾದರಿ ಸಂಸದ ಎಂಬ ಬಿರುದು ಪಡೆದುಕೊಂಡಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಮ್ಮೆ ಅವರಿಗೆ ಆಶೀರ್ವಾದ ಮಾಡುವಂತೆ ಮಂಜುಳಾ ಮನವಿ ಮಾಡಿದರು.

ನಗರಸಭೆ ಉಪಾಧ್ಯಕ್ಷ ಸೋಮಶೇಖರ್, ಮಹಿಳಾ ಬ್ಲಾಕ್ ಅಧ್ಯಕ್ಷೆ ನಾಗಮ್ಮ, ರಾಮನಗರ ಟೌನ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಮದ್, ಮುಖಂಡರಾದ ಗೋವಿಂದರಾಜು ಮತ್ತಿತರರು ಹಾಜರಿದ್ದರು.21ಕೆಆರ್ ಎಂಎನ್ 7.ಜೆಪಿಜಿ

ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಪರವಾಗಿ ಅವರ ಸಹೋದರಿ ಮಂಜುಳಾ ಮತಯಾಚನೆ ಮಾಡಿದರು.