ಸಾರಾಂಶ
ಕನ್ನಡಪ್ರಭ ವಾರ್ತೆ ಕೊರಟಗೆರೆ
ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಮತ್ತು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಸಮ್ಮತಿಯಂತೆ ಸರ್ವ ಸದಸ್ಯರು ಬೆಂಬಲ ಸೂಚಿಸಿ ತಾಲೂಕು ವ್ಯವಸಾಯೋತ್ಪನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಜಿ.ಎಂ ಆಯ್ಕೆಯಾದರು. ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರ ಒಮ್ಮತದಂತೆ ಅವಿರೋಧ ಆಯ್ಕೆಯಾಗಿದ್ದು, ಸಂಭ್ರಮಾಚರಣೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿ, ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘ ಕೊರಟಗೆರೆಯಲ್ಲಿ ವಿಶಾಲವಾಗಿ ಬೆಳೆದಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಆರ್ಥಿಕ ವ್ಯವಹಾರವನ್ನು ನಡೆಸಿ ರೈತರಿಗೆ ಕೃಷಿಗೆ ಅವಶ್ಯಕ ವಸ್ತುವಾದ ಗೊಬ್ಬರ, ಬಿತ್ತನೆ ಬೀಜವನ್ನು ಒದಗಿಸುವ ಗುರಿಯನ್ನು ಹೊಂದಿದ್ದೇನೆ ಎಂದು ಹೇಳಿದರು.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್ ಮಾತನಾಡಿ, ಗೃಹ ಸಚಿವರ ಆದೇಶದ ಮೆರೆಗೆ ಇಂದು ನಡೆದ ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಿವಾನಂದ್ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ರೈತರಿಗೆ ಅನುಕೂಲ ರೀತಿಯಲ್ಲಿ ತಮ್ಮ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಸಹಕಾರ ಸಂಘವನ್ನು ಆರ್ಥಿಕತೆಯಲ್ಲಿ ಅಭಿವೃದ್ಧಿ ಪಡಿಸುವಂತೆ ಸಲಹೆ ನೀಡಿ ಶುಭಹಾರೈಸಿದರು.ಜಿ.ಪಂ ಮಾಜಿ ಸದಸ್ಯ ಮಹಾಲಿಂಗಯ್ಯ ಮಾತನಾಡಿ, ಟಿಎಪಿಸಿಎಂಸ್ ಅಧ್ಯಕ್ಷರಾಗಿ ಶಿವಾನಂದ್ ಅವಿರೋಧ ಆಯ್ಕೆಯಾಗಿರುವುದು ಖುಷಿ ತಂದಿದೆ. ಅವರಿಗೆ ಇದೇ ತರಹ ಇನ್ನಷ್ಟು ಜವಬ್ದಾರಿ ಉನ್ನತ ಸ್ಥಾನಗಳು ಒದಗಿ ಬರಲಿ ಎಂದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಹನುಮಾನ್, ಪ.ಪಂ ಮಾಜಿ ಉಪಾಧ್ಯಕ್ಷ ಮಂಜುನಾಥ್, ರುದ್ರಪ್ರಸಾದ್, ರಾಘವೇಂದ್ರ, ನರಸೇಗೌಡ, ತ್ರಿಯಂಬಕರಾಜು, ಶಶಿಕಲಾ, ಉಮಾದೇವಿ, ಸುನಿತಾ, ವಿನಯ್, ಮಹೇಶ್ ಸೇರಿದಂತೆ ಟಿಎಪಿಸಿಎಂಎಸ್‌ನ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.