ಎಂ ಶಿವರ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ ಶಿವರಾಜು ಅವಿರೋಧ ಆಯ್ಕೆ

| Published : Nov 05 2024, 12:44 AM IST / Updated: Nov 05 2024, 12:45 AM IST

ಎಂ ಶಿವರ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾಗಿ ಶಿವರಾಜು ಅವಿರೋಧ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.

ಚನ್ನರಾಯಪಟ್ಟಣ: ತಾಲೂಕಿನ ಬಾಗೂರು ಹೋಬಳಿಯ ಎಂ. ಶಿವರ ಗ್ರಾಮಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಎಸ್.ಎಸ್. ಶಿವರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಇದ್ದ ತಿಮ್ಮಪ್ಪಗೌಡರು ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಶಿವರಾಜು ಆಯ್ಕೆಯಾಗಿದ್ದು, ಗ್ರಾಮಪಂಚಾಯಿತಿಯ ೧೪ ಸದಸ್ಯರಲ್ಲಿ ೧೩ ಜನ ಸದಸ್ಯರು ಹಾಜರಿದ್ದರು. ಚುನಾವಣಾಧಿಕಾರಿಯಾಗಿ ಗಿರೀಶ್ ಎ. ಡಿ. ಕರ್ತವ್ಯ ನಿರ್ವಹಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಉಪಾಧ್ಯಕ್ಷರಾದ ಎಸ್. ಎಸ್. ಶಿವರಾಜು ಎಂ. ಶಿವರ ಗ್ರಾಮಪಂಚಾಯಿತಿ ವ್ಯಕ್ತಿಗೆ ಬರುವ ಹಳ್ಳಿಗಳ ಅಭಿವೃದ್ಧಿಗೆ ಮೊದಲು ಆದ್ಯತೆ ನೀಡಲಾಗುವುದು. ಕುಡಿಯುವ ನೀರು, ಬೀದಿ ದೀಪ, ಸ್ವಚ್ಛತೆ, ಶಾಲಾ ಕಟ್ಟಡಗಳ ದುರಸ್ತಿ ಸೇರಿದಂತೆ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುತ್ತೇನೆ ಎಂದರು.