ಅನುಮಾನಸ್ಪದವಾಗಿ ಆರು ಜಾನುವಾರುಗಳು ಮೃತಪಟ್ಟಿರುವ ಘಟನೆ ಶೆಟ್ಟಳ್ಳಿ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ರೈತ ಪರಶಿವಮೂರ್ತಿಗೆ ಸೇರಿದ ಆರು ಹಸುಗಳು ಮೇಲ್ನೋಟಕ್ಕೆ ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಕನ್ನಡಪ್ರಭ ವಾರ್ತೆ, ಚಾಮರಾಜಗರ
ಅನುಮಾನಸ್ಪದವಾಗಿ ಆರು ಜಾನುವಾರುಗಳು ಮೃತಪಟ್ಟಿರುವ ಘಟನೆ ಶೆಟ್ಟಳ್ಳಿ ಗ್ರಾಮದಲ್ಲಿ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ರೈತ ಪರಶಿವಮೂರ್ತಿಗೆ ಸೇರಿದ ಆರು ಹಸುಗಳು ಮೇಲ್ನೋಟಕ್ಕೆ ವಿಷ ಪ್ರಾಶನದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.ಘಟನೆ ವಿವರ:ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ರೈತ ಪರಶಿವಮೂರ್ತಿ ಎಂಬವರು ತಮ್ಮ ಜಮೀನಿನಲ್ಲಿ ಆರು ಹಸುಗಳನ್ನು ಮೇವು ಮೇಯಲು ಬಿಟ್ಟಿದ್ದರು. ಬಾಯಲ್ಲಿ ನೊರೆ ಕಚ್ಚಿಕೊಂಡು ಜಾನುವಾರಗಳ ಹೊಟ್ಟೆ ಊದಿಕೊಂಡು ಸಾವನ್ನಪ್ಪಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಯಾರೋ ಕಿಡಿಗೇಡಿಗಳು ಜಾನುವಾರುಗಳಿಗೆ ವಿಷ ಹಾಕಿಕೊಂದಿದ್ದಾರೆ. ಮೂಕ ಪ್ರಾಣಿಗಳ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸಂಬಂಧಪಟ್ಟ ಇಲಾಖೆ ಹಿರಿಯ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಜಾನುವಾರುಗಳ ಸಾವಿಗೆ ನಿಖರ ಕಾರಣವನ್ನು ತಿಳಿದು ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಶೆಟ್ಟಳ್ಳಿ ಗ್ರಾಮಕ್ಕೆ ತಹಸೀಲ್ದಾರ್ ಚೈತ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.