ಥಾರ್ ಜೀಪ್, ಆಟೋ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಸೇರಿದಂತೆ 5 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದ ಘಟನೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಭಾನುವಾರ ನಡೆದಿದೆ.
ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ:
ಥಾರ್ ಜೀಪ್, ಆಟೋ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಆಟೋ ಚಾಲಕ ಸೇರಿದಂತೆ 5 ಮಂದಿ ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಒಬ್ಬರು ಆಸ್ಪತ್ರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದ ಘಟನೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಭಾನುವಾರ ನಡೆದಿದೆ.ಒಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಉಳಿದ 3 ಮಂದಿ ತೀವ್ರವಾಗಿ ಗಾಯಗೊಂಡು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ 1ನೇ ಮತ್ತು 7ನೇ ವಾರ್ಡಿನ ಮಹಿಳಾ ರೈತ ಕೂಲಿ ಕಾರ್ಮಿಕರು ಪಟ್ಟಣದಿಂದ ಕೂಲಿ ಕೆಲಸಕ್ಕೆ ಆಟೋದಲ್ಲಿ ಹೋಗಿ ಮತ್ತೇ ಮನೆಗೆ ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಉಮಾದೇವಿ (55), ವಿಜಯ (40), ಲಕ್ಷಮ್ಮ (50) ಸರೋಜಮ್ಮ (65) ಆಟೋ ಚಾಲಕ ಅಂಜಿನಪ್ಪ (35) ಮೃತಪಟ್ಟ ದುರ್ದೈವಿಗಳು. ಅರುಣಮ್ಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಮಾರ್ಗ ಮಧ್ಯ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಗಂಗಾದೇವಿ, ಲಕ್ಷ್ಮೀದೇವಿ, ರತ್ನಮ್ಮ, ರಾಜಮ್ಮ ಅವರನ್ನು ಚಿಕ್ಕಬಳ್ಳಾಪುರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಕೂಲಿ ಕೆಲಸ ಮುಗಿಸಿ ಕಾರ್ಮಿಕರು ಆಟೋದಲ್ಲಿ ಬೆಂಗಳೂರು ಕಡೆಯಿಂದ ಮನೆಗೆ ವಾಪಸ್ ಬರುವಾಗ ರಾ.ಹೆ.44ರಲ್ಲಿ ಥಾರ್ ಜೀಪ್ ಅತೀ ವೇಗವಾಗಿ ಬಂದು ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಆಟೋಗೆ ಹಿಂಭಾಗದಲ್ಲಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಆಟೋದಲ್ಲಿದ್ದ 4 ರೈತ ಮಹಿಳಾ ಕೂಲಿ ಕಾರ್ಮಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಮೃತಪಟ್ಟರು. ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.