ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಬುಧವಾರ ಸುಬ್ರಹ್ಮಣ್ಯ ಷಷ್ಠಿಯ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಸೇರಿದಂತೆ ವಿವಿಧ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು.ಬೆಳಗ್ಗಿನಿಂದ ಶ್ರೀ ಸುಬ್ರಹ್ಮಣ್ಯ ನಾಗ ದೇವತಾ ಗುಡಿಯಲ್ಲಿ ಶ್ರೀ ನಾಗದೇವರಿಗೆ ತನುತಂಬಿಲ, ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕ, ಹರಿದ್ರಾರ್ಣವ ಅಭಿಷೇಕ, ಕ್ಷೀರಾಭಿಷೇಕ ಸೇವೆಗಳೊಂದಿಗೆ ವಿಶೇಷ ಕೈಂಕರ್ಯವನ್ನು ನೆರವೇರಿಸಲಾಯಿತು.ಪ್ರಧಾನ ಅರ್ಚಕರಾದ ರಾಘವೇಂದ್ರಭಟ್ ಅವರು ದಿನದ ವಿಶೇಷ ಪೂಜಾ ಕೈಂಕರ್ಯ ಮಹಾಮಂಗಳಾರತಿ ನೆರವೇರಿಸಿದರು. ಭಕ್ತಾದಿಗಳು ದೇವರ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭ ದೇವಾಲಯದ ಟ್ರಸ್ಟ್ ಅಧ್ಯಕ್ಷ ಕೆ.ಎನ್.ಪೂಣ್ಣಚ್ಚ, ಕಾರ್ಯದರ್ಶಿ ಬಿ.ಸಿ.ದಿನೇಶ್, ಕೋಶಾಧಿಕಾರಿ ಡಾ.ಬಿ.ತಮ್ಮಯ್ಯ, ಪ್ರಧಾನ ಟ್ರಸ್ಟಿಗಳಾದ ಕೆ.ಎಸ್.ಮಂಜುನಾಥ್, ದತ್ತ ಸೋಮಣ್ಣ, ಎಂ.ಎ.ಬೋಪಯ್ಯ ಸೇರಿದಂತೆ ಊರಿನ ಹಿರಿಯರು ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. ಮಹಾ ಪೂಜೆಯ ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು.ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಷಷ್ಠಿ ಸಂಪನ್ನ
ಕೊಡಗರಹಳ್ಳಿ ಶ್ರೀ ಬೈತೂರಪ್ಪ ಶ್ರೀ ಪೊವ್ವೆದಿ ಬಸವೇಶ್ವರ ದೇವಾಲಯದಲ್ಲಿ ಷಷ್ಠಿ ಹಬ್ಬ ಆಚರಿಸಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.