ಮೈಲಿಗಲ್ಲು ಸೃಷ್ಠಿಸಿರುವ ಎಸ್‌ಕೆಡಿಆರ್‌ಪಿ

| Published : Sep 12 2024, 01:45 AM IST

ಮೈಲಿಗಲ್ಲು ಸೃಷ್ಠಿಸಿರುವ ಎಸ್‌ಕೆಡಿಆರ್‌ಪಿ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡ ಮತ್ತು ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಕಾರ್ಯ ಮಾಡುತ್ತಿದ್ದು ಗ್ರಾಮೀಣಭಿವೃದ್ಧಿ ಮೂಲಕ ಉತ್ತಮ ಮೈಲಿಗಲ್ಲನ್ನು ಸೃಷ್ಠಿಸಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ ತಿಳಿಸಿದರು.

ಹೊಸಕೋಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡ ಮತ್ತು ಮಧ್ಯಮ ವರ್ಗದವರ ಅಭಿವೃದ್ಧಿ ದೃಷ್ಟಿಯಿಂದ ಉತ್ತಮ ಕಾರ್ಯ ಮಾಡುತ್ತಿದ್ದು ಗ್ರಾಮೀಣಭಿವೃದ್ಧಿ ಮೂಲಕ ಉತ್ತಮ ಮೈಲಿಗಲ್ಲನ್ನು ಸೃಷ್ಠಿಸಿದೆ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶ್‌ಗೌಡ ತಿಳಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುಜ್ಞಾನನಿಧಿ ಶಿಷ್ಯವೇತನ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಅಭಿವೃದ್ಧಿಯ ದೃಢಸಂಕಲ್ಪ ಹೊತ್ತು ರಾಜ್ಯದ ಗ್ರಾಮ ಗ್ರಾಮಗಳಲ್ಲಿ ಶಿಕ್ಷಣ, ಆರೋಗ್ಯ, ಪರಿಸರ, ಕೃಷಿ, ಗುಡಿ ಕೈಗಾರಿಕೆ, ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮಾಡಿದೆ. ಸರ್ಕಾರ ಮಾಡಬೇಕಾದ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಪ್ರಶಂಶಿಸಿದರು.

ಜಿಲ್ಲಾ ನಿರ್ದೇಶಕ ಉಮಾರಬ್ಬ ಮಾತನಾಡಿ, ತಾಲೂಕಿನಲ್ಲಿ 1949 ಸ್ವಸಹಾಯ ಸಂಘಗಳಿದ್ದು, 16716 ಸದಸ್ಯರಿದ್ದಾರೆ. ಯೋಜನೆಗೆ 25 ವರ್ಷ ತುಂಬಿದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಸ್ವಸಹಾಯ ಸಂಘದಲ್ಲಿನ ಬಡಜನರ ಮಕ್ಕಳಿಗೆ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಅನುಕೂಲವಾಗುವಂತೆ 2017ರಲ್ಲಿ ಸುಜ್ಞಾನ ನಿಧಿ ಶಿಷ್ಯವೇತನ ಕಾರ್ಯಕ್ರಮ ಜಾರಿಗೆ ತರಲಾಯಿತು. ಇವರಿಗೆ ರಾಜ್ಯದಲ್ಲಿ ಒಟ್ಟು 65 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅಭ್ಯಾಸ ಮುಗಿಯುವವರೆಗೂ ಪ್ರತಿ ತಿಂಗಳು ಸುಜ್ಞಾನ ನಿಧಿ ನೀಡುತ್ತಿದ್ದು 75 ಕೋಟಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗಿದೆ. ಹೊಸಕೋಟೆ ತಾಲೂಕಿನಲ್ಲಿ ಇದುವರೆಗೆ ಒಟ್ಟು 287 ವಿದ್ಯಾರ್ಥಿಗಳಿಗೆ 40.28 ಲಕ್ಷ ವಿನಿಯೋಗಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 62 ಮಕ್ಕಳಿಗೆ ಸುಜ್ಞಾನ ನಿಧಿ ಶಿಶ ವೇತನ ಮಂಜೂರಾಗಿದೆ ಎಂದರು.

ತಾಪಂ ಇಒ ನಾರಾಯಣಸ್ವಾಮಿ, ಪೊಲೀಸ್ ಇನ್ಸ್‌ಪೆಕ್ಟರ್ ಅಶೋಕ್, ಬಿಇಒ ಪದ್ಮನಾಭ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಕುರುಬರಹಳ್ಳಿ ವೆಂಕಟೇಶ್, ಹರೀಶ್, ಮಮತಾ, ಕೃಷ್ಣಪ್ಪ, ಯೋಜನಾಧಿಕಾರಿ ಹರೀಶ್, ಭೀಮ್ ಸೇವಾ ಸಮಿತಿ ರಾಜ್ಯಾಧ್ಯಕ್ಷ ಶ್ರೀಕಾಂತ್ ರಾವಣ್, ಮುಖಂಡರಾದ ಚಿಕ್ಕ ಹರಳಗೆರೆ ಜಗದೀಶ್, ಮುತ್ಸದ್ರ ಆನಂದಪ್ಪ, ನಡುವಿನಪುರ ಮಂಜುನಾಥ್, ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಜರಿದ್ದರು.

ಫೋಟೋ : 11 ಹೆಚ್‌ಎಸ್‌ಕೆ 1

ಹೊಸಕೋಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ವಿ.ಸತೀಶ್ ಗೌಡ ಉದ್ಘಾಟಿಸಿದರು.