ನ.4ರಿಂದ ನಗರದಲ್ಲಿ ಕೌಶಲ್ಯ ಶೃಂಗಆಯೋಜನೆ: ಡಾ.ಶರಣಪ್ರಕಾಶ್‌

| Published : Sep 20 2025, 02:05 AM IST

ನ.4ರಿಂದ ನಗರದಲ್ಲಿ ಕೌಶಲ್ಯ ಶೃಂಗಆಯೋಜನೆ: ಡಾ.ಶರಣಪ್ರಕಾಶ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದ ಕೌಶಲ್ಯಾಭಿವೃದ್ಧಿ ಕ್ಷೇತ್ರದ ಬೆಳವಣಿಗೆಗಾಗಿ ಬಾರಿಗೆ ನ. 4ರಿಂದ 6ರವರೆಗೆ ಬೆಂಗಳೂರಿನಲ್ಲಿ ಪ್ರಥಮ ಆವೃತ್ತಿಯ ಬೆಂಗಳೂರು ಕೌಶಲ್ಯ ಶೃಂಗ 2025 ಆಯೋಜಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯದ ಕೌಶಲ್ಯಾಭಿವೃದ್ಧಿ ಕ್ಷೇತ್ರದ ಬೆಳವಣಿಗೆಗಾಗಿ ಬಾರಿಗೆ ನ. 4ರಿಂದ 6ರವರೆಗೆ ಬೆಂಗಳೂರಿನಲ್ಲಿ ಪ್ರಥಮ ಆವೃತ್ತಿಯ ಬೆಂಗಳೂರು ಕೌಶಲ್ಯ ಶೃಂಗ 2025 ಆಯೋಜಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ 5 ವರ್ಷಗಳಲ್ಲಿ ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗುವ ನಿರೀಕ್ಷೆಯಿದೆ. ಅದಕ್ಕೆ ಪೂರಕವಾಗಿ ಉದ್ಯೋಗಾವಕಾಶ ಕಲ್ಪಿಸುವುದು, ಯುವಜನರಲ್ಲಿ ಕೌಶಲ್ಯ ಹೆಚ್ಚಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದರ ಭಾಗವಾಗಿ ನ. 4ರಿಂದ 6ರವರೆಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗ 2025 ಆಯೋಜಿಸಲಾಗುತ್ತಿದೆ. ನ. 4ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೌಶಲ್ಯ ಶೃಂಗಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿಗೆ ಹೊಸ ನೀತಿ:

ರಾಜ್ಯದ ಕೌಶಲ್ಯಾಭಿವೃದ್ಧಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ನೂತನ ಕೌಶಲ್ಯ ನೀತಿ ರೂಪಿಸಲಾಗುತ್ತಿದೆ. ಅದು ಬಹುತೇಕ ಅಂತಿಮ ಹಂತದಲ್ಲಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಅದನ್ನು ಮಂಡಿಸಲಾಗುವುದು. ಅದರ ಮೂಲಕ ರಾಜ್ಯದ ಯುವ ಜನರಲ್ಲಿ ಕೌಶಲ್ಯ ಹೆಚ್ಚಿಸುವುದಕ್ಕೆ ಉತ್ತೇಜನ ನೀಡಲಾಗುವುದು ಎಂದು ಡಾ. ಶರಣಪ್ರಕಾಶ ಪಾಟೀಲ್‌ ಹೇಳಿದರು.

ಕೌಶಲ್ಯ ತರಬೇತಿಗೆ ನಿರಾಸಕ್ತಿ

ಯುವನಿಧಿಯಿಂದ 3 ಲಕ್ಷಕ್ಕೂ ಹೆಚ್ಚಿನ ಯುವಜನರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಅದರ ಜತೆಗೆ ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಆದರೆ, ಅದಕ್ಕೆ ಹೆಚ್ಚಿನ ಫಲಾನುಭವಿಗಳು ಆಸಕ್ತಿ ತೋರುತ್ತಿಲ್ಲ. ಕೌಶಲ್ಯಾಭಿವೃದ್ಧಿ ತರಬೇತಿಗೆ ಸೇರ್ಪಡೆಯಾದರೆ ಯುವನಿಧಿ ನೆರವು ಕಡಿತಗೊಳ್ಳುತ್ತದೆ ಎಂಬ ಭಾವನೆ ಫಲಾನುಭವಿಗಳಲ್ಲಿದೆ. ಆದರೆ, ತರಬೇತಿಗೆ ಸೇರ್ಪಡೆಯಾದರೂ ಯುವನಿಧಿಯಿಂದ ನೆರವು ಕಡಿತವಾಗುವುದಿಲ್ಲ. ಈ ಕುರಿತು ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಹೇಳಿದರು.