ರಾಜ್ಯದಲ್ಲಿ ವಿಫುಲ ಉದ್ಯೋಗಾವಕಾಶಗಳಿದ್ದು, ಅದಕ್ಕೆ ತಕ್ಕಂತೆ ಕೌಶಲ್ಯಾಧಾರಿತ ಮಾನವ ಸಂಪನ್ಮೂಲದ ಕೊರತೆಯಿದೆ. ಯುವಜನತೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜ್ಯದಲ್ಲಿ ವಿಫುಲ ಉದ್ಯೋಗಾವಕಾಶಗಳಿದ್ದು, ಅದಕ್ಕೆ ತಕ್ಕಂತೆ ಕೌಶಲ್ಯಾಧಾರಿತ ಮಾನವ ಸಂಪನ್ಮೂಲದ ಕೊರತೆಯಿದೆ. ಯುವಜನತೆ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಸಲಹೆ ನೀಡಿದರು.ಭಾನುವಾರ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಆಯೋಜಿಸಿದ್ದ ‘ವಿಶ್ವಮಿತ್ರಾ ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಅವರು ಮಾತನಾಡಿದರು. ಕಂಪನಿಗಳು ಅನುಭವಸ್ಠ ಸಿಬ್ಬಂದಿಗೆ ಹೆಚ್ಚಿನ ಆದ್ಯತೆ ನೀಡುತ್ತವೆ. ರಾಜ್ಯದಲ್ಲಿ ಉದ್ಯೋಗದ ಕೊರತೆಯಿಲ್ಲ ಅದಕ್ಕೆ ತಕ್ಕನಾದ ಕೌಶಲ್ಯವನ್ನು ಎಲ್ಲ ಸಮಾಜದ ಯುವಕರು ಬೆಳಸಿಕೊಳ್ಳಬೇಕು. ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು ಹೆಚ್ಚಿನ ಜನರಿಗೆ ಸರ್ಕಾರಿ ಸೌಲಭ್ಯ ಒದಗಿಸಲು 50 ಕೋಟಿ ರು. ವಿಶೇಷ ಅನುದಾನ ನೀಡುವಂತೆ ಸರ್ಕಾರದ ಮನವೊಲಿಸುವುದಾಗಿ ಅವರು ಭರವಸೆ ನೀಡಿದರು.
ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಮಾತನಾಡಿ, ಬ್ರಾಹ್ಮಣ ಸಮಾಜದಲ್ಲಿ ಒಗ್ಗಟ್ಟು ಮೂಡಿದರೆ ಶಾಸನಸಭೆಯಲ್ಲಿ ಹೆಚ್ಚಿನ ಪ್ರತಿನಿಧಿಗಳನ್ನು ಕಾಣಬಹುದು. ಸ್ವತಂತ್ರ ಪೂರ್ವ ಮತ್ತು ನಂತರದ ಅಭಿವೃದ್ಧಿಯಲ್ಲಿ ಸಮಾಜ ಸಕ್ರೀಯವಾಗಿ ತೊಡಗಿದೆ. ಎಲ್ಲರನ್ನು ಒಂದುಗೂಡಿಸುವುದಕ್ಕಾಗಿ, ಸ್ವಾತಂತ್ರಕ್ಕಾಗಿ ಸಾಕಷ್ಟು ತ್ಯಾಗ, ಬಲಿದಾನ ಮಾಡಿದೆ. ಸಮಾಜದ ಬಹಳಷ್ಟು ಜನರು ಆಡಳಿತ ಸೇವೆಯಲ್ಲಿ ಅಧಿಕಾರಿಗಳಾಗಿ ಆಡಳಿತಕ್ಕೆ ದೀರ್ಘ ಕಾಲ ಚೈತನ್ಯ ತುಂಬಿದ್ದಾರೆ. ಹೀಗಾಗಿ ಯುವಕರ ಸಾಧನೆ ರಾಷ್ಟ್ರಕ್ಕೆ ದೊಡ್ಡ ಶಕ್ತಿಯಾಗಲಿದೆ ಎಂದು ಹೇಳಿದರು.ಈ ವೇಳೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ನಿಕಟ ಪೂರ್ವ ಅಧ್ಯಕ್ಷ ಅಶೋಕ್ ಹಾರನಹಳ್ಳಿ, ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರವಿ ತಿರ್ಲಾಪುರ ಇದ್ದರು.
---ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿಶ್ವಮಿತ್ರಾ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು.
