ವಿದ್ಯಾರ್ಥಿಗಳಿಗೆ ಯಶಸ್ಸು ನಿಜವಾದ ಬೆಳಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಹೇಳಿದರು.

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಯಶಸ್ಸು ನಿಜವಾದ ಬೆಳಕು ಎಂದು ಹಿರಿಯ ಪತ್ರಕರ್ತ ಆರುಂಡಿ ಶ್ರೀನಿವಾಸಮೂರ್ತಿ ಹೇಳಿದರು.

ಅವರು ನಗರದ ಹೊಯ್ಸಳ ಕಾಲೇಜಿನ ವಾರ್ಷಿಕೋತ್ಸವ ಮತ್ತು ಅಂತಿಮ ವರ್ಷದ ಬಿ.ಕಾಂ., ವಿದ್ಯಾರ್ಥಿಗಳಿಗೆ ಆತ್ಮೀಯವಾದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಅಂಕಗಳಿಗಿಂತ ಅಂಕೆ ಮುಖ್ಯ. ಜೀವನದಲ್ಲಿ ಕೇವಲ ಅಂಕಗಳು ಮಾತ್ರ ಕೆಲಸ ಮಾಡುವುದಿಲ್ಲ. ಕೌಶಲ್ಯಗಳು ಕೂಡ ಮುಖ್ಯವಾಗುತ್ತವೆ. ಅದರಲ್ಲೂ ಕಾಮರ್ಸ್ ವಿದ್ಯಾರ್ಥಿಗಳು ಪದವಿ ಮುಗಿದ ನಂತರ ವಿವಿಧ ಕೋರ್ಸುಗಳನ್ನು ಹೆಚ್ಚುವರಿಯಾಗಿ ಕಲಿಯಬೇಕಾಗುತ್ತದೆ. ಮತ್ತು ಪ್ರಸ್ತುತ ಎಐನಂತಹ ಕೌಶಲ್ಯಗಳನ್ನು ಕೂಡ ಕಲಿಯಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಯುತ ವಿಲಿಯಂ ಡಿಸೋಜರವರು ವಿದ್ಯಾರ್ಥಿಗಳಿಗೆ ಶಿಸ್ತು ಮತ್ತು ಸಂಯಮದ ಬಗ್ಗೆ ಹಾಗೂ ಮುಂದಿನ ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಅಂಕಣ ಜೊತೆಗೆ ವಿನಯತೆಯು ಕೂಡ ಇರಬೇಕೆಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಆರ್.ಶಂಕರ್ ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಕಾಲೇಜಿನಲ್ಲಿ ನಡೆದ ವಿವಿಧ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳ ಸಾಧನೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ಕಾಲೇಜಿನ ಕ್ಷೇಮಪಾಲನಾಧಿಕಾರಿ ಸಲ್ಮಾನ್ ಪ್ರಾಸ್ತಾವಿಕ ಭಾಷಣ ಮಾಡಿದರು. ಕುಮಾರಿ ಜ್ಯೋತಿ ಮತ್ತು ತೇಜಸ್ವಿನಿ ಪ್ರಾಥನೆ ಮಾಡಿದರು. ಕುಮಾರಿ ಆಯೇಷಾ ಮತ್ತು ಕುಮಾರಿ ಅಲಿಯ ಕುಬ್ರಾ ಕಾರ್ಯಕ್ರಮ ನಿರೂಪಿಸಿದರು. ಕುಮಾರಿ ಮುಸ್ಕಾನ್ ವಂದಿಸಿದರು.