ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ

| Published : Aug 08 2024, 01:30 AM IST

ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ
Share this Article
  • FB
  • TW
  • Linkdin
  • Email

ಸಾರಾಂಶ

ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪರ ಆಡಳಿತದಿಂದ ಕೆಂಗೆಟ್ಟು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಪಾದಯಾತ್ರೆ ಇಲ್ಲಸಲ್ಲದ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಕುರುಬ ಸಮಾಜದ ಮುಖಂಡರು ಕಿಡಿಕಾರಿದರು.

ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಕೈಬಿಡದಿದ್ದರೆ ಬಿಜೆಪಿ- ಜೆಡಿಎಸ್ ಪಕ್ಷಗಳ ವಿರುದ್ಧ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ ಎಂದರು.

ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ. 2ನೇ ಬಾರಿ ಮುಖ್ಯಮಂತ್ರಿ ಆಗಿರುವುದನ್ನು ಸಹಿಸದೆ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳಂಕ ರಹಿತ ರಾಜಕಾರಣಿ ಸಿದ್ದರಾಮಯ್ಯ ವಿರುದ್ದ ವಿಪಕ್ಷಗಳು ಹಾಗೂ ಕೇಂದ್ರ ಸರ್ಕಾರ ಇಲ್ಲಸಲ್ಲದ ಷಡ್ಯಂತ್ರ ನಡೆಸುತ್ತಿವೆ. ಸಿದ್ದು ಅವರ ಶಕ್ತಿಯನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿಎಂಗೆ ನೀಡಿರುವ ಶೋಕಾಸ್ ನೋಟಿಸನ್ನು ರಾಜ್ಯಪಾಲರು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಆಗಸ್ಟ್ 9 ರಂದು ಮೈಸೂರಿನಲ್ಲಿ ಬೃಹತ್ ಜನಾಂದೋಲನದಲ್ಲಿ ತಾಲೂಕಿನ ಸರ್ವ ಪಕ್ಷಗಳ ಸಮುದಾಯ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕುರುಬ ಸಂಘದ ಅಧ್ಯಕ್ಷ ಪುರುಷತ್ತಮ್, ಪುರಸಭಾ ಸದಸ್ಯ ರವೀಂದ್ರ ಬಾಬು, ತಾಪಂ ಮಾಜಿ ಸದಸ್ಯ ಸಣ್ಣನಿಂಗೇಗೌಡ,ಮುಖಂಡರಾದ ಗುಡುಗನಹಳ್ಳಿ ರಾಯಪ್ಪ, ಕೆ.ಆರ್.ಪೇಟೆ ಸ್ನೇಹಿತ ರಮೇಶ್, ಮಾರ್ಗೋನಹಳ್ಳಿ ಮಂಜುನಾಥ್, ಹಿರಿಕಳಲೆ ಗ್ರಾ.ಪಂ ಸದಸ್ಯ ರಾಮಕೃ?ಗೌಡ, ಯುವ ಮುಖಂಡ ಕಾಡುಮೆಣಸ ರುಕೇಶ್, ಕಾಳೇಗೌಡ ಸೇರಿದಂತೆ ಹಲವರು ಇದ್ದರು.