ಸಾರಾಂಶ
ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್ ಇದ್ದರು.
ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ವಿಶ್ವವಿದ್ಯಾನಿಲಯದ 104ನೇ ಘಟಿಕೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸುದರ್ಶನ ನರಸಿಂಹ ಕ್ಷೇತ್ರದ ಪೀಠಾದಿಪತಿ ಡಾ. ಭಾಷ್ಯಂಸ್ವಾಮಿ, ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ, ಮಾಜಿ ಸಚಿವ ಎಂ.ಆರ್. ಸೀತಾರಾಂ ಹಾಗೂ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು.ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ನಾಲ್ವರಿಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಜಯದೇವ ಹೃದ್ರೋಗ ಸಂಸ್ಥೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ಕುಲಪತಿ ಪ್ರೊ.ಎನ್.ಕೆ. ಲೋಕನಾಥ್, ಕುಲಸಚಿವರಾದ ವಿ.ಆರ್. ಶೈಲಜಾ, ಪ್ರೊ.ಕೆ.ಎಂ. ಮಹದೇವನ್ ಇದ್ದರು.
ಜಾವಗಲ್ ಗೈರಾಗಿದ್ದರುಮೈಸೂರು ವಿವಿ 103ನೇ ಘಟಿಕೋತ್ಸವದಲ್ಲಿ ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿತ್ತು. ಆದರೆ, ಅವರು 2023ರ ಅಕ್ಟೋಬರ್ ನಲ್ಲಿ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಮ್ಯಾಚ್ ರೆಫ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರಿಂದ ಘಟಿಕೋತ್ಸವಕ್ಕೆ ಗೈರಾಗಿದ್ದರು. ಹೀಗಾಗಿ, ಅವರಿಗೆ 104ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಅನ್ನು ರಾಜ್ಯಪಾಲರು ಪ್ರದಾನ ಮಾಡಿದರು.