ಎಸ್.ಎಂ.ಕೃಷ್ಣ ಒಬ್ಬ ಸಜ್ಜನ ರಾಜಕಾರಣಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪಿ.ಮರಿಸ್ವಾಮಿ

| Published : Dec 11 2024, 12:48 AM IST

ಸಾರಾಂಶ

ಕಳೆದ ೬ ದಶಕದ ಹಿಂದೆ ರಾಜಕಾರಣ ಪ್ರವೇಶಿಸಿದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಐಟಿಬಿಟಿ ನಗರ ಮಾಡುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಎಸ್.ಎಂ.ಕೃಷ್ಣ ಅವರ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಿಎಂ ದಿ.ಎಸ್.ಎಂ.ಕೃಷ್ಣ ನಿಧನದ ಗೌರವಾರ್ಥ ಶ್ರದ್ಧಾಂಜಲಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕಳೆದ ೬ ದಶಕದ ಹಿಂದೆ ರಾಜಕಾರಣ ಪ್ರವೇಶಿಸಿದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಐಟಿಬಿಟಿ ನಗರ ಮಾಡುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ವಯೋಸಹಜ ಕಾರಣದಿಂದ ನಿಧನರಾದ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಮಾಜಿ ರಾಜ್ಯಪಾಲ ಎಸ್.ಎಂ.ಕೃಷ್ಣ ಅವರ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಾಲಾ ಮಕ್ಕಳಿಗೆ ಅಕ್ಷರ ದಾಸೋಹ ಚಾಲನೆ, ಯಶಸ್ವಿನಿ ಯೋಜನೆಜಾರಿ ಸೇರಿದಂತೆ ಹಲವಾರು ಯೋಜನೆಗಳನ್ನು ಎಸ್‌.ಎಂ.ಕೃಷ್ಣ ಅವರು ಜಾರಿ ಮಾಡಿದರು. ಅವರ ನಿಧನ ಕರ್ನಾಟಕಕ್ಕೆ ತುಂಬಲಾರದ ನಷ್ಟ ಎಂದು ಹೇಳಿದರು.

ಇದೇ ವೇಳೆ ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಪಂ ಮಾಜಿ ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ, ಚುಡಾ ಸದಸ್ಯರಾದ ದ್ವಾರ್ಕಿ, ರಾಜು, ಕೆಪಿಸಿಸಿ ಸದಸ್ಯ ಸಯ್ಯದ್‌ ರಫಿ, ನಗರಸಭೆ ಮಾಜಿ ಸದಸ್ಯ ಪುಟ್ಟಸ್ವಾಮಿ, ಹೆಬ್ಬಸೂರು ವೀರಭದ್ರಸ್ವಾಮಿ, ನಾಗವಳ್ಳಿ ನಾಗಯ್ಯ, ಮುತ್ತಿಗೆದೊರೆ, ಕರಿನಂಜನಪುರಸ್ವಾಮಿ, ರಾಮಸಮುದ್ರ ಶಿವಮೂರ್ತಿ, ಬಸವರಾಜು, ಎ.ಎಚ್. ನಸ್ರುಲ್ಲಾಖಾನ್, ಪರ್ವಿಜ್ ಹಾಜರಿದ್ದರು.

ಎಸ್.ಎಂ.ಕೃಷ್ಣಗೆ ಅಂತಿಮ ಗೌರವಕೊಳ್ಳೇಗಾಲ: ಮೃತ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಉಗ್ರಾಣ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ಜಯಣ್ಣ ಅವರಿಗೆ ಇಲ್ಲಿನ ಮಾನಸ ಶಿಕ್ಷಣ ಸಂಸ್ಥೆಯ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.ಪಟ್ಟಣದ ಮಾನಸ ಕಾಲೇಜು ಆವರಣದಲ್ಲಿ ಮಧ್ಯಾಹ್ನ ಎಸ್.ಎಂ.ಕೃಷ್ಣ ಹಾಗೂ ಎಸ್.ಜಯಣ್ಣ ರವರ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಿ, ಪುಷ್ಪ ನಮನ ಅರ್ಪಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.ನಿಸರ್ಗ ಪಿಯು ಕಾಲೇಜು ಪ್ರಾಂಶುಪಾಲ ಕೃಷ್ಣೇಗೌಡ ಡಿ. ಮಾತನಾಡಿ, ರಾಜ್ಯದ ಅಭಿವೃದ್ಧಿ ಹಾಗೂ ಬೆಂಗಳೂರಿನ ಅಭಿವೃದ್ಧಿಗೆ ಎಸ್.ಎಂ.ಕೃಷ್ಣರವರು ಅಪಾರ ಕೊಡುಗೆ ಇದೆ. ಅದೇ ರೀತಿ ಕೊಳ್ಳೇಗಾಲ ವಿದಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ಜಯಣ್ಣರವರು ಅಪಾರ ಕೊಡುಗೆ ನೀಡಿದ್ದಾರೆ. ಈ ಇಬ್ಬರ ಗಣ್ಯ ವಕ್ತಿಗಳ ಅಗಲಿಕೆ ರಾಜ್ಯಕ್ಕೆ ತುಂಬಲಾಗದ ನಷ್ಟ ಉಂಟಾಗಿದೆ ಎಂದು ತಿಳಿಸಿದರು.ಮಾನಸ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಚನ್ನಶೆಟ್ಟಿ, ಧನಂಜಯ, ಕೃಷ್ಣೇಗೌಡ, ಮುಖ್ಯ ಶಿಕ್ಷಕ ಶಂಕರ್, ಭೋಧಕ, ಭೋಧಕೇತರರ ವರ್ಗ ಮಾನಸ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.