ಸಾರಾಂಶ
ಕನ್ನಡಪ್ರಭ ವಾರ್ತೆ ಪಿರಿಯಾಪಟ್ಟಣಕರ್ನಾಟಕದ ಅಜಾತಶತ್ರು ರಾಜಕಾರಣಿ ಹಾಗೂ ಧೀಮಂತ ನಾಯಕ ಎಸ್.ಎಂ. ಕೃಷ್ಣ ಅವರು ಎಂದು ಪಿರಿಯಾಪಟ್ಟಣ ತಾಲೂಕು ಒಕ್ಕಲಿಗರ ಸಂಘದ ಗೌರವಾಧ್ಯಕ್ಷ ಪಿ. ಪ್ರಶಾಂತ್ ಗೌಡ ಹೇಳಿದರು. ಪಿರಿಯಾಪಟ್ಟಣ ತಾಲೂಕು ಒಕ್ಕಲಿಗರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಅವರು ಮಾತನಾಡಿದರು.ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಐಟಿ ತವರು ಎಂಬ ಬಿರುದು ಸಿಗಲು ಕಾರಣವಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ಕರ್ನಾಟಕದ ಕೀರ್ತಿ ಪತಾಕೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಜಗತ್ತಿನ ಮೂಲೆ ಮೂಲೆಗೂ ಹಬ್ಬಿಸಿದ್ದ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಬೇಕಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಆರ್ಥಿಕ ಸ್ವಾವಲಂಬನೆಗಾಗಿ ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಆರಂಭಿಸಿದರು. ಸ್ತ್ರೀ ಶಕ್ತಿ ಸ್ವ-ಸಹಾಯ ಸಂಘ ಮನೆ ಮನೆ ತಲುಪಿದ್ದು, ಕೋಟ್ಯಾಂತರ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.ಎಲ್ಲರಿಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ನೀಡಲು ಯಶಸ್ವಿನಿ ಯೋಜನೆ ಆರಂಭಿಸಿದರು, ಇದರಿಂದ ಪ್ರತಿಯೊಬ್ಬರು ಗುಣಮಟ್ಟದ ಆರೋಗ್ಯ ಪಡೆಯಬಹುದಾಗಿದೆ ಎಂದರು.ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ರವಿ, ಪುರಸಭಾ ಸದಸ್ಯ ಪಿ.ಸಿ. ಕೃಷ್ಣ, ಒಕ್ಕಲಿಗರ ಸಂಘದ ಅಧ್ಯಕ್ಷ ಆನಂದ್ ಬಸಲಾಪುರ, ಕಾನೂನು ಸಲಹೆಗಾರ ಸಂದೀಪ್, ಕಾರ್ಯದರ್ಶಿ ಮೋಹನ್, ಖಜಾಂಚಿ ಮನು, ನಿರ್ದೇಶಕರಾದ ರವಿ ಮುಖಂಡರಾದ ಮಂಜುನಾಥ್, ಮಹದೇವ್, ಮಂಜು, ಹರ್ಷ, ರಘು ಬಸಲಾಪುರ, ಸುನಿಲ್, ಶಶಿ, ಶಿವರಾಜ್ ಇದ್ದರು.