ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಕಿರು ಉದ್ದಿಮೆ ಉತ್ಪನ್ನಗಳ ಮಾರಾಟಕ್ಕೆ ಹೆಚ್ಚಿನ ಅವಕಾಶ ಕಲ್ಪಿಸುವ ಅವಶ್ಯಕತೆ ಇದ್ದು, ಕೋಲಾರ ನಗರದ ಜನನಿಬಿಡ ಪ್ರದೇಶದಲ್ಲಿ ವಾರಕ್ಕೊಂದು ದಿನ ರೈತರ ಸಂತೆಯನ್ನು ನಡೆಸಬೇಕು ಎಂದು ಸಂಸದ ಎಂ.ಮಲ್ಲೇಶ್ ಬಾಬು ಸಲಹೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಕೃಷಿ ಇಲಾಖೆ, ಬೆಂಗಳೂರು ಕೆಪೆಕ್ ಲಿಮಿಟೆಡ್‌ನಿಂದ ಪಿಎಂಎಫ್‌ಎಂಇ ಜಿಲ್ಲಾ ಮಟ್ಟದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಉದ್ಯಮ ಆರಂಭಿಸಲು ನೆರವು
ಜಿಪಂ ಸಿಇಓ ಪ್ರವೀಣ್ ಪಿ.ಬಾಗೇವಾಡಿ, ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಹಾಗೂ ಚಾಲ್ತಿಯಲ್ಲಿರುವ ಉದ್ದಿಮೆ ವಿಸ್ತರಿಸಲು ಅವಕಾಶವಿದ್ದು, ಬ್ಯಾಂಕ್ ಸಾಲದೊಂದಿಗೆ ಶೇ.೫೦ ಅಥವಾ ಗರಿಷ್ಠ ೧೫ ಲಕ್ಷ ರೂ.ಗಳವರೆಗೆ ಸಹಾಯಧನ ಸಿಗಲಿದೆ. ಆತ್ಮನಿರ್ಭರ ಭಾರತ ಅಭಿಯಾನ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ (ಪಿಎಂಎಫ್‌ಎಂಇ) ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ನೀಡುವ ಸಹಾಯಧನ ಯೋಜನೆಯಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ತಿಳಿದು ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗುವುದಿಲ್ಲ. ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ಮಾಡುವ ಸಂದರ್ಭದಲ್ಲಿ ಕೃಷಿ ವಿಶ್ವ ವಿದ್ಯಾಲಯದ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ ಪಡೆದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದರು.ಉದ್ಯಮ ಆರಂಭಿಸಲು ಸಲಹೆ
ಆತ್ಮ ನಿರ್ಭರ ಯೋಜನೆಯ ಲಾಭ ಎಲ್ಲ ಅರ್ಹ ಫಲಾನುಭವಿಗಳು ಪಡೆದುಕೊಳ್ಳಬೇಕು. ಬೇಕರಿ ಉದ್ದಿಮೆ, ಖಾರ ಪುಡಿ ತಯಾರಿಕೆ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಪ್ರೊಜೆಕ್ಟ್ ತಯಾರಿಸಿ ಕೃಷಿ ಇಲಾಖೆಗೆ ಸಲ್ಲಿಸಿದಾಗ ಸೂಕ್ತ ಮಾರ್ಗದರ್ಶನದಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ, ಕಾರ್ಯಾಗಾರದ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದರು.ಜಿಪಂ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ಮಾತನಾಡಿ, ಪಿಎಂಎಫ್‌ಎಂಇ ಒಂದು ಉಪಯುಕ್ತ ಯೋಜನೆಯಾಗಿದೆ. ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಬ್ಯಾಂಕ್‌ಗಳು ಸಹಕರಿಸುತ್ತವೆ. ಬೇಡಿಕೆಗನುಸಾರವಾಗಿ ರೈತರು ಬೆಳೆ ಬೆಳೆದು ಮಾರುಕಟ್ಟೆಗೆ ಅವಕಾಶ ಕಲ್ಪಿಸಬೇಕಾಗಿದೆ ಎಂದರು.ಗಮನ ಸೆಳೆದ ಉತ್ಪನ್ನಗಳುಪಿಎಂಎಫ್ಎಂಇ ಯೋಜನೆ ಫಲಾನುಭವಿಗಳಿಂದ ಉದ್ದಿಮೆಗಳ ಉತ್ಪನ್ನದ ಗಾಣದ ಎಣ್ಣೆ, ಅವಲಕ್ಕಿ, ಖಾರ ಪುಡಿ, ಚಟ್ನಿ ಪುಡಿ, ರಾಗಿ ಲಾಡು, ಪುಳಿಯೋಗರೆ ಗೊಜ್ಜು, ವಿವಿಧ ಬಗೆಯ ಅಣಬೆ, ಬೇಕರಿ ತಿಂಡಿಗಳು ವಿವಿಧ ಆಹಾರ ಉತ್ಪನ್ನಗಳ ಮಾರಾಟ ಮಳಿಗೆಗಳು ಜನರನ್ನು ಆಕರ್ಷಿಸಿದವು.
ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷರಾದ ಲಕ್ಷ್ಮೀದೇವಮ್ಮ ರಮೇಶ್, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ವಡಗೂರು ನಾಗರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಜೋಶಿ, ತೋಟಗಾರಿಕೆ ಇಲಾಖೆಯ ಕುಮಾರಸ್ವಾಮಿ, ಕೃಷಿ ವಿಜ್ಞಾನ ಕೇಂದ್ರದ ಶಿವಾನಂದ ಇದ್ದರು..
)
;Resize=(128,128))
;Resize=(128,128))
;Resize=(128,128))