ಸಾರಾಂಶ
ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಅಭಿಶಿಕ್ಷಣ ಕಾರ್ಯಕ್ರಮ ನಡೆಯಿತು. ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಕುಂದಾಪುರ
ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು.ಅವರು ಇತ್ತೀಚೆಗೆ ಇಲ್ಲಿನ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತಾ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಪರಿಶ್ರಮ ಮತ್ತು ಬದ್ಧತೆಯನ್ನು ಹಾಕಬೇಕು ಎಂದು ಅವರು ಅಭಿಪ್ರಾಯಪಟ್ಟರು.ಸಂಸ್ಥೆಯ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್. ಶೆಟ್ಟಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಿವಿಧ ವಿಷಯಗಳ ಶಿಕ್ಷಕರು ಸಂಬಂಧಪಟ್ಟ ಪಠ್ಯಗಳನ್ನು ಪರಿಚಯಿಸಿದರು. ಗುರುಕುಲ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸುನಿಲ್ ಪ್ಯಾಟ್ರಿಕ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಸುಮಲತಾ ಕಾರ್ಯಕ್ರಮವನ್ನು ನಿರೂಪಿಸಿದರು.