ಸ್ಮಾರ್ಟ್‌ಸಿಟಿ ಕಾರ್ಯದಿಂದಲೇ ನಗರದಲ್ಲಿ ಸಮಸ್ಯೆ ಉದ್ಬವ

| Published : May 15 2024, 01:30 AM IST

ಸ್ಮಾರ್ಟ್‌ಸಿಟಿ ಕಾರ್ಯದಿಂದಲೇ ನಗರದಲ್ಲಿ ಸಮಸ್ಯೆ ಉದ್ಬವ
Share this Article
  • FB
  • TW
  • Linkdin
  • Email

ಸಾರಾಂಶ

ಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಲೇ ಮಳೆ ಸುರಿಯುತ್ತಿದ್ದಂತೆ ನಗರದಲ್ಲಿ ಸಮಸ್ಯೆಗಳು ಉದ್ಬವಿಸಲು ಪ್ರಮುಖ ಕಾರಣವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್‌.ಲೋಕೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿಸ್ಮಾರ್ಟ್‌ಸಿಟಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳಿಂದಲೇ ಮಳೆ ಸುರಿಯುತ್ತಿದ್ದಂತೆ ನಗರದಲ್ಲಿ ಸಮಸ್ಯೆಗಳು ಉದ್ಬವಿಸಲು ಪ್ರಮುಖ ಕಾರಣವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎನ್‌.ಲೋಕೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಗರದ 80 ಅಡಿ, 60 ಎಡಿ ಅಗಲದ ರಸ್ತೆಗಳು ಸೇರಿ ಎಲ್ಲ ಕಡೆ ರಸ್ತೆ, ಚರಂಡಿಗಳನ್ನು ನಿರ್ಮಿಸಲಾಗಿದೆ. ಆದರೆ, ರಸ್ತೆಗೆ ತಕ್ಕಂತೆ ಚರಂಡಿಗಳನ್ನು ನಿರ್ಮಿಸಿಲ್ಲ. ದೊಡ್ಡ ಚರಂಡಿಗಳನ್ನು ಚಿಕ್ಕದಾಗಿ ನಿರ್ಮಿಸಲಾಗಿದೆ. ಕೆಲ ಭಾಗದಲ್ಲಿ ಚರಂಡಿಗಳಲ್ಲಿ ಪ್ಲಾಸ್ಟಿಕ್‌ಗಳನ್ನು ಹಾಕಿದ್ದರಿಂದ ನೀರು ಭರ್ತಿಯಾಗಿ ರಸ್ತೆಯ ಮೇಲೆ ಹರಿದು ಸಮಸ್ಯೆ ಸೃಷ್ಟಿಸಿದೆ ಎಂದರು.

ನಗರದಲ್ಲಿ ಸುರಿದ ಮಳೆಯಿಂದಾಗಿ ಚರಂಡಿಗಳು ಬ್ಲಾಕ್ ಆಗಿ ರಸ್ತೆಗಳ ಮೇಲೆ ನೀರು ಹರಿದಿದೆ. ಅಲ್ಲದೆ, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮಳೆಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸುವ ಕೆಲಸವನ್ನು ಪಾಲಿಕೆ ಸಿಬ್ಬಂದಿ ಮಾಡುತ್ತಿದ್ದಾರೆ. ಎಲ್ಲ ಚರಂಡಿಗಳನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಲಾಗಿದೆ ಎಂದರು.

ಬೆಳಗಾವಿ ನಗರಕ್ಕೆ ನೀರು ಪೂರೈಕೆ ಮಾಡುವ ರಕ್ಕಸಕೊಪ್ಪ ಜಲಾಶಯದಲ್ಲಿ 2255. 65 ಅಡಿ ಮಾತ್ರ ನೀರು ಸಂಗ್ರಹವಿದ್ದು, 37 ದಿನಗಳವರೆಗೆ ಸಾಕಾಗುತ್ತದೆ. ದಿನದ 24 ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ನೀರಿನ ಕೊರತೆ ಉಂಟಾಗಿದ್ದರಿಂದ ಕೆಲ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗಿದೆ. ಜನರಿಗೆ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.