ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ

| Published : Sep 04 2025, 01:00 AM IST

ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಸ್ಮಾರ್ಟ್ ಕ್ಲಾಸ್ ಮತ್ತು ಸ್ಪರ್ಧಾತ್ಮಕ ಬೋಧನಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯದಂತಹ ಶಿಕ್ಷಣ ಕ್ರಮಗಳು ಇದ್ದು, ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಗೆ ದಾಖಲಾಗಿ ಉಚಿತವಾಗಿ ದೊರೆಯುವ ಸೌಕರ್ಯಗಳನ್ನು ಪಡೆದುಕೊಂಡು ಉನ್ನತಿ ಹೊಂದಬೇಕಿದೆ ಎಂದು ಹೇಳಿದರು. ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒತ್ತು ನೀಡಿದರೆ ಅವರ ಮುಂದಿನ ಶೈಕ್ಷಣಿಕ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ ಎಂದು ಶಾಸಕ ಎ.ಮಂಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಗೆ ಒತ್ತು ನೀಡಿದರೆ ಅವರ ಮುಂದಿನ ಶೈಕ್ಷಣಿಕ ಬದುಕು ರೂಪಿಸಿಕೊಳ್ಳಲು ನೆರವಾಗಲಿದೆ ಎಂದು ಶಾಸಕ ಎ.ಮಂಜು ತಿಳಿಸಿದರು.

ತಾಲೂಕಿನ ಬೆಳವಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ನೂತನವಾಗಿ ಆರಂಭಿಸಿರುವ ಸ್ಮಾರ್ಟ್ ಕ್ಲಾಸ್ ಮತ್ತು ಸ್ಪರ್ಧಾತ್ಮಕ ಬೋಧನಾ ಕೊಠಡಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯದಂತಹ ಶಿಕ್ಷಣ ಕ್ರಮಗಳು ಇದ್ದು, ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಗಳಲ್ಲಿಗೆ ದಾಖಲಾಗಿ ಉಚಿತವಾಗಿ ದೊರೆಯುವ ಸೌಕರ್ಯಗಳನ್ನು ಪಡೆದುಕೊಂಡು ಉನ್ನತಿ ಹೊಂದಬೇಕಿದೆ ಎಂದು ಹೇಳಿದರು.

ಈ ನೂತನ ಕೊಠಡಿಯಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಎಂದು ನಾಮಕರಣ ಮಾಡಲಾಗಿದೆ. ಈ ಎರಡು ವಿಷಯಗಳನ್ನು ವಿದ್ಯಾರ್ಥಿಗಳು ಅವಲೋಕನ ನಡೆಸಿದರೇ ಮುಂದಿನ ಶಿಕ್ಷಣದ ಆಯ್ಕೆ ಈಗಿನಿಂದಲೇ ತೆರದುಕೊಳ್ಳುತ್ತದೆ. ಎಸ್ಸೆಸ್ಸೆಲ್ಸಿ ಪಾಸಾದ ಮೇಲೆ ಮುಂದಿನ ಶಿಕ್ಷಣದ ಆಯ್ಕೆಯನ್ನು ನೀವೇ ಆಯ್ಕೆಮಾಡಿಕೊಳ್ಳುವ ಹಂತಕ್ಕೆ ಈ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಕರೆದುಕೊಂಡು ಹೋಗಲಿದೆ. ಆದರೆ ಇಲ್ಲಿ ಶಿಕ್ಷಣ ಬೋಧನೆ ಮಾಡುವ ಶಿಕ್ಷಕರು ಮಕ್ಕಳನ್ನು ಸಿದ್ಧಗೊಳಿಸುವುದು ಅಷ್ಟೇ ಮುಖ್ಯವಾಗಿದೆ ಎಂದು ಸಲಹೆ ಮಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ ಅವರು ಮಾತನಾಡಿ, ಈ ಶೈಕ್ಷಣಿಕ ಸಾಲಿನಿಂದಲೇ ತಾಲೂಕಿನ 28 ಸರ್ಕಾರಿ ಪ್ರೌಢಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮೂಲಕ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳನ್ನು ಆರಂಭಿಸುವ ಚಿಂತನೆ ನಡೆದಿದೆ. ಇಂದು ಬೆಳವಾಡಿ ಶಾಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಆರಂಭಗೊಂಡಿದ್ದು, ಮುಂದಿನ ಎರಡು ತಿಂಗಳ ಒಳಗೆ ಉಳಿದ ಶಾಲೆಗಳಲ್ಲಿ ಕಾರ್ಯಾರಂಭಗೊಳ್ಳಲಿದೆ. ಶಾಸಕರ ಸಂಪೂರ್ಣ ಸಹಕಾರದೊಂದಿಗೆ ಈ ಕಾರ್ಯವನ್ನು ಅಣಿಗೊಳಿಸಲಾಗುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮೋಹನ್, ಇಸಿಒಗಳಾದ ಯೋಹೇಶ್, ಶಿವಪ್ರಕಾಶ್, ಶಿಕ್ಷಕ ಚಲುವಯ್ಯ, ಸಹ ಶಿಕ್ಷಕರು, ಊರಿನ ಪ್ರಮುಖರು ಹಾಜರಿದ್ದರು.