ಭರಣಿ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ

| Published : Apr 14 2025, 01:21 AM IST

ಭರಣಿ ಶಾಲೆಯಲ್ಲಿ ಸ್ಮಾರ್ಟ್‌ ಕ್ಲಾಸ್‌ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನಾದ್ಯಂತ ಎಲ್ಲೆಡೆ ಮಂಗಳವಾರ ಸಮುದಾಯದತ್ತ ಶಾಲಾ ಕಾರ್ಯಕ್ರಮಗಳು ಜರುಗಿದವು.

ಯಲ್ಲಾಪುರ; ತಾಲೂಕಿನಾದ್ಯಂತ ಎಲ್ಲೆಡೆ ಮಂಗಳವಾರ ಸಮುದಾಯದತ್ತ ಶಾಲಾ ಕಾರ್ಯಕ್ರಮಗಳು ಜರುಗಿದವು.

ತಾಲೂಕಿನ ಕುಂದರಗಿ ಗ್ರಾಪಂ ವ್ಯಾಪ್ತಿಯ ಭರಣಿಯ ಸ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ, ಸಮುದಾಯದತ್ತ ಕಾರ್ಯಕ್ರಮ, ೭ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ೬೦ ವರ್ಷ ಪೂರೈಸಿದ ಅಕ್ಷರ ದಾಸೋಹದ ಅಡುಗೆ ಸಿಬ್ಬಂದಿಗೆ ಬೀಳ್ಕೊಡುಗೆ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಮಾತನಾಡಿ, ಶೈಕ್ಷಣಿಕ ಪ್ರಗತಿಗೆ ಸ್ಮಾರ್ಟ್ ಕ್ಲಾಸ್ ಸಹಕಾರಿಯಾಗುತ್ತದೆ. ಈಗಾಗಲೇ ತಾಲೂಕಿನಾದ್ಯಂತ ಅನೇಕ ಶಾಲೆಗಳಲ್ಲಿ ಸ್ಮಾರ್ಟ್ ತರಗತಿ ಪ್ರಾರಂಭಿಸಲಾಗಿದೆ ಎಂದರು.

ಸರ್ಕಾರದಿಂದ ಸಿಗುವ ಸವಲತ್ತುಗಳು ಶಾಲೆಯಲ್ಲಿ ಸಮರ್ಪಕವಾಗಿ ಬಳಕೆಯಾದರೆ ದೇಶದ ಭದ್ರ ಬುನಾದಿಗೆ ಕಾರಣವಾಗುವ ಹಿನ್ನೆಲೆಯಲ್ಲಿ ಎಲ್ಲ ಶಿಕ್ಷಣಪ್ರೇಮಿಗಳು ಹಾಗೂ ನಾಗರಿಕರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಬಿಆರ್ಪಿ ಪ್ರಶಾಂತ ಪಟಗಾರ ಮಾತನಾಡಿ, ಪಾಲಕರು ವಿದ್ಯಾರ್ಥಿಗಳನ್ನು ಹೆರುತ್ತಾರಾದರೆ; ಶಿಕ್ಷಕರು ಶಾಲೆಗಳಲ್ಲಿ ಅವರ ಜೀವನ ರೂಪಿಸುತ್ತಾರೆ ಎಂದರು.

ಗ್ರಾಪಂ ಸದಸ್ಯ ಗಣೇಶ ಹೆಗಡೆ ಮಾತನಾಡಿ, ವಿದ್ಯಾರ್ಥಿಗಳನ್ನು ಸದೃಢ ಪ್ರಜೆಗಳನ್ನಾಗಿ, ಉತ್ತಮ ಹವ್ಯಾಸಗಳೊಂದಿಗೆ ರೂಪಿಸಬೇಕೆಂದು ಹೇಳಿದರು.

ಅಕ್ಷರ ದಾಸೋಹ ಯೋಜನೆಯಡಿ ೨೦೦೩ರಿಂದ ಈವರೆಗೆ ಕಾರ್ಯ ನಿರ್ವಹಿಸಿ, ವಯೋನಿವೃತ್ತರಾದ ಜಾನಕಿ ದೇವಾಡಿಗ ಹಾಗೂ ನೇತ್ರಾವತಿ ನಾಯ್ಕ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಗ್ರಾಪಂ ಅಧ್ಯಕ್ಷೆ ಯಮುನಾ ಸಿದ್ದಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಪ್ರಶಾಂತ್ ಜಿ.ಎನ್., ಸಿಆರ್ಪಿ ವಿಷ್ಣು ಭಟ್ಟ ಉಪಸ್ಥಿತರಿದ್ದರು. ಮುಖ್ಯಾಧ್ಯಾಪಕ ವಿನಾಯಕ ಗೌಡ ಕಾರ್ಯಕ್ರಮ ನಿರ್ವಹಿಸಿ, ಸ್ವಾಗತಿಸಿದರು. ಶಿಕ್ಷಕಿ ಗೌರಮ್ಮ ವಂದಿಸಿದರು.