ಭಾವೈಕ್ಯತೆಯಿಂದ ಸಾಮಾಜಿಕ ಬದುಕು ಸದೃಢ

| Published : Jan 04 2025, 12:33 AM IST

ಸಾರಾಂಶ

ದೊಡ್ಡಬಳ್ಳಾಪುರ: ಈಗಿನಿಂದಲೇ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಹೇಳಿದರು.

ದೊಡ್ಡಬಳ್ಳಾಪುರ: ಈಗಿನಿಂದಲೇ ವಿದ್ಯಾರ್ಥಿಗಳು ರಾಷ್ಟ್ರ ಪ್ರೇಮ, ರಾಷ್ಟ್ರಭಕ್ತಿ, ರಾಷ್ಟ್ರೀಯ ಭಾವೈಕ್ಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು ಸಮಿತಿ ಹಮ್ಮಿಕೊಂಡಿದ್ದ ಭಾರತ ಸೇವಾ ಸೇವಾದಳ ಸಪ್ತಾಹದ ಅಂಗವಾಗಿ ರಾಷ್ಟ್ರೀಯ ಭಾವೈಕ್ಯತೆ ಮಕ್ಕಳ ಮೇಳದಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಈಗಿನಿಂದಲೇ ರಾಷ್ಟ್ರಪ್ರೇಮ ರಾಷ್ಟ್ರಭಕ್ತಿ ಬೆಳೆಸುವ ಕೆಲಸ ಮುಖ್ಯವಾಗಿ ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವಂತಹ ಕೆಲಸ ಆಗಬೇಕು. ಮಹಾತ್ಮ ಗಾಂಧೀಜಿ ಕಂಡ ಕನಸು ನನಸಾಗಬೇಕು. ಇಂತಹ ಕಾರ್ಯಗಳನ್ನು ಭಾರತ ಸೇವಾದಳ ಶಾಲೆಗಳಿಗೆ ಹಮ್ಮಿಕೊಂಡಿರುವುದು ತುಂಬಾ ಸಂತೋಷದ ವಿಷಯ ಎಂದರು.

ಭಾರತ ಸೇವಾದಳದ ಜಿಲ್ಲಾ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಮಾತನಾಡಿ, ತಾಲೂಕಿನಲ್ಲಿರುವ ಎಲ್ಲಾ ಶಾಖೆಗಳಿಗೆ 5 ಸಾವಿರ ಉಚಿತ ಸಮವಸ್ತ್ರ ನೀಡಲಾಗುವುದು. ನಾಯಕರು ವಿದ್ಯಾರ್ಥಿಗಳಲ್ಲಿ ಶಿಸ್ತು ಮೂಡಿಸುವಲ್ಲಿ ಶ್ರಮವಹಿಸುತ್ತಿರುವುದು ಸಂತಸದ ವಿಷಯ ಎಂದರು.

ತಾಲೂಕು ಸಮಿತಿಯ ಅಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯಕ್ಕಾಗಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಶಿಸ್ತು ಸಾಮರಸ್ಯ ಮೂಡಿಸುವಲ್ಲಿ ಭಾರತ ಸೇವಾದಳ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ಟಿಎಪಿಎಂಸಿ ನಿರ್ದೇಶಕ ರಂಗಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರವಿಸಿದ್ದಪ್ಪ, ಭೂ ಮಂಜೂರಾತಿ ಸಮಿತಿ ಸದಸ್ಯ ಶ್ರೀಧರ್, ಹೊಸಕೋಟೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಹರೀಶ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಮುರಳೀಧರ್, ನಗರಸಭೆ ಸದಸ್ಯ ಕಾಂತರಾಜ್, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಮಾಜಿ ಸದಸ್ಯ ರಾಮಕೃಷ್ಣ ಕಾರ್ಯಾಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ, ಜ್ಯೋತಿ ಕುಮಾರ್, ತಾಲೂಕು ಸಮಿತಿ ನಿರ್ದೇಶಕರು ಭಾಗವಹಿಸಿದ್ದರು.

ಪ್ರಭಾತಫೇರಿಗೆ ಶಾಸಕರಿಂದ ಚಾಲನೆ:

ಕಾರ್ಯಕ್ರಮಕ್ಕೂ ಮೊದಲು ಸುಮಾರು 300 ವಿದ್ಯಾರ್ಥಿಗಳು ನಗರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಅಂಬೇಡ್ಕರ್ ಭವನದವರೆಗೂ ಪ್ರಭಾತ ಪೇರಿ ಮೂಲಕ ಜಾಥ ನಡೆಸಿದರು. ಮಕ್ಕಳ ಪ್ರಭಾತಪೇರಿಗೆ ಶಾಸಕ ಧೀರಜ್‌ ಮುನಿರಾಜ್‌ ಹಸಿರು ನಿಶಾನೆ ತೋರಿ ಶುಭ ಹಾರೈಸಿದರು.

3ಕೆಡಿಬಿಪಿ3-

ದೊಡ್ಡಬಳ್ಳಾಪುರದಲ್ಲಿ ಭಾರತ ಸೇವಾದಳ ಸಪ್ತಾಹದ ಅಂಗವಾಗಿ ನಡೆದ ಪ್ರಭಾತಫೇರಿಗೆ ಶಾಸಕ ಧೀರಜ್‌ ಮುನಿರಾಜ್‌ ಚಾಲನೆ ನೀಡಿದರು. ಜಿಲ್ಲಾ ಸೇವಾದಳ ಅಧ್ಯಕ್ಷ ಜಿ.ಲಕ್ಷ್ಮೀಪತಿ ಇತರರಿದ್ದರು.