ರೀಲ್ಸ್ಗಳ ಮೂಲಕವೂ ಉತ್ತಮ ವಿಚಾರಗಳು ಮತ್ತು ಸಾಮಾಜಿಕ ಸಂದೇಶಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ. ಸ್ಥಳೀಯ ದೇವಾಲಯಗಳು, ಐತಿಹಾಸಿಕ ಸ್ಥಳಗಳು, ಗ್ರಾಮೀಣ ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಪರಿಚಯಿಸುವ ಅರ್ಥಪೂರ್ಣ ರೀಲ್ಸ್ಗಳ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಬಹುದು.
ಕನ್ನಡಪ್ರಭ ವಾರ್ತೆ ಮಂಡ್ಯ
ಸಾಮಾಜಿಕ ಜಾಲತಾಣಗಳನ್ನು ಕೇವಲ ಮನರಂಜನೆಗೆ ಸೀಮಿತಗೊಳಿಸದೆ, ಅವುಗಳನ್ನು ಸೃಜನಶೀಲ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಯುವಜನರಿಗೆ ಸಲಹೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ, ಚಿಕ್ಕಮಂಡ್ಯ ಇವರ ವತಿಯಿಂದ ತಾಲೂಕಿನ ಚಿಕ್ಕಮಂಡ್ಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೀಲ್ಸ್ಗಳ ಮೂಲಕವೂ ಉತ್ತಮ ವಿಚಾರಗಳು ಮತ್ತು ಸಾಮಾಜಿಕ ಸಂದೇಶಗಳನ್ನು ಜನರಿಗೆ ತಲುಪಿಸಲು ಸಾಧ್ಯವಿದೆ. ಸ್ಥಳೀಯ ದೇವಾಲಯಗಳು, ಐತಿಹಾಸಿಕ ಸ್ಥಳಗಳು, ಗ್ರಾಮೀಣ ಸಂಸ್ಕೃತಿ ಹಾಗೂ ನಾಡಿನ ಪರಂಪರೆಯನ್ನು ಪರಿಚಯಿಸುವ ಅರ್ಥಪೂರ್ಣ ರೀಲ್ಸ್ಗಳ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.ನಾಡಿನ ಅನೇಕ ಮಹನೀಯರ ಆದರ್ಶ ಜೀವನ, ಸಾಧನೆ ಹಾಗೂ ಸಮಾಜಕ್ಕೆ ನೀಡಿದ ಅಮೂಲ್ಯ ಕೊಡುಗೆಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಜಯಂತಿ ಆಚರಣೆಗಳ ಪ್ರಮುಖ ಉದ್ದೇಶವಾಗಿದೆ. ಮಹನೀಯರ ಜೀವನ ಮೌಲ್ಯಗಳನ್ನು ಅರಿತುಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆ ಹಾಗೂ ಸಾಧನಾ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವುದು ಅಗತ್ಯ. ಶಾಲಾ ಹಂತದಲ್ಲಿಯೇ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರನ್ನು ಸನ್ಮಾನಿಸುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಸಾಧನೆಯ ಹಂಬಲ ಮೂಡಿಸಬೇಕು ಎಂದರು.ಶಾಲೆಯ ಮುಖ್ಯ ಶಿಕ್ಷಕರಾದ ದೇವರಾಜು ಹಾಗೂ ಸಿಬ್ಬಂದಿ ವರ್ಗದವರಿಗೂ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಒನಕೆ ಓಬವ್ವ ಧೀರಮಹಿಳೆ: ತಹಸೀಲ್ದಾರ್ ಶ್ರೇಯಸ್ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆತಾನು ಒಬ್ಬಂಟಿ ಎಂಬುದನ್ನು ಬದಿಗಿಟ್ಟು ಶತ್ರು ಸೈನಿಕರ ಹತ್ಯೆಗೈದು ನಾಡಿನ ರಕ್ಷಣೆಗಾಗಿ ಹೋರಾಡಿ ಪ್ರಾಣ ಬಿಟ್ಟ ಒನಕೆ ಓಬವ್ವ ಧೀರಮಹಿಳೆ ಎಂದು ತಹಸೀಲ್ದಾರ್ ಶ್ರೇಯಸ್ ತಿಳಿಸಿದರು.ತಾಲೂಕು ಆಡಳಿತದಿಂದ ಆಯೋಜಿಸಿದ್ದ ಒನಕೆ ಓಬವ್ವ ಜಯಂತಿಯಲ್ಲಿ ಮಾತನಾಡಿ, 18ನೇ ಶತಮಾನದಲ್ಲಿ ಚಿತ್ರದುರ್ಗವನ್ನು ಆಳುತ್ತಿದ್ದ ಪಾಳೇಗಾರ ಮದಕರಿನಾಯಕರ ಆಡಳಿತದಲ್ಲಿ ಬದುಕಿದ್ದ ಓಬವ್ವ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿಯಾಗಿದ್ದರೂ ಕೂಡಾ ತನ್ನ ಕೋಟೋಯೊಳಗೆ ನುಸುಳುವುದನ್ನು ನೋಡಿ ತನ್ನ ಜೀವದ ಹಂಗನ್ನು ತೊರೆದು ಶತ್ರು ಸೈನಿಕರನ್ನು ಸಂಹಾರಮಾಡಿ ತನ್ನ ಪ್ರಾಣ ಬಿಟ್ಟ ಮಹಾನ್ ಹೋರಾಟಗಾರ್ತಿ. ಓಬವ್ವ ಅವರ ಸಾಧನೆ ಶತಶತಮಾನಗಳಿಗೂ ಉಳಿಯುತ್ತದೆ ಎಂದರು.ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಗ್ರೇಟ್ 2 ಲೋಕೇಶ್, ಸಹಾಯಕ ನಿರ್ದೇಶಕರು, ಕೃಷಿ ಇಲಾಖೆಯ ದೀಪಕ್, ಜಿಲ್ಲಾ ಛಲವಾಧಿ ಸಂಚಾಲಕ ಮಾಂಬಳ್ಳಿ ಜೈರಾಮ್, ಶಿಕ್ಷಣ ಇಲಾಖೆಯ ವೀರಭದ್ರಯ್ಯ, ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.