ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಸಾಮಾಜಿಕ ಪರಿಶೋಧನಾಧಿಕಾರಿ ಭೇಟಿ

| Published : Sep 01 2025, 01:04 AM IST

ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಸಾಮಾಜಿಕ ಪರಿಶೋಧನಾಧಿಕಾರಿ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಾಮಾಜಿಕ ಪರಿಶೋಧನಾ ಅಧಿಕಾರಿ ಸಿ.ಕೆ. ಮಲ್ಲಪ್ಪ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದರು. ಈ ಸಂದರ್ಭ ಕಾಮಗಾರಿಗಳನ್ನು ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಾಮಾಜಿಕ ಪರಿಶೋಧನಾಧಿಕಾರಿ ಸಿ ಕೆ ಮಲ್ಲಪ್ಪ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೈಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ನಂತರ ಆಡಳಿತ ಮಂಡಳಿಯೊಂದಿಗೆ ಸಂವಾದ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಭೌತಿಕವಾಗಿ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅಧಿಕಾರಿಗಳ ತಂಡ ವೈಯಕ್ತಿಕ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ, ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಮೇಶ್ ಎಂ ಆರ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಪರಮೇಶ್ ಕುಮಾರ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾರಾಯಣ ಮೂರ್ತಿ ಅವರು ಗ್ರಾಮೀಣಾಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.