ಸಾರಾಂಶ
ಕೊಪ್ಪಳ ಇನ್ನರ್ ವೀಲ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಜಿಲ್ಲಾ ಅಂಕಿತ ಅಧಿಕಾರಿ
ಕನ್ನಡಪ್ರಭ ವಾರ್ತೆ ಕೊಪ್ಪಳಸಮಾಜ ಸೇವೆ ಮಾಡುವುದು ಬಹಳ ಅಗತ್ಯ ಮತ್ತು ಅದು ಸಂಪೂರ್ಣ ನಿಸ್ವಾರ್ಥವಾಗಿರಬೇಕು ಎಂದು ಜಿಲ್ಲಾ ಅಂಕಿತ ಅಧಿಕಾರಿ ಡಾ. ಅಲಕಾ ನಂದ್ ಮಾಳಗಿ ಹೇಳಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಕೊಪ್ಪಳ ಇನ್ನರ್ ವೀಲ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಸಮಾಜದಲ್ಲಿ ಮನುಷ್ಯ ಉತ್ತಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಒಳ್ಳೆಯ ಸೇವೆ ಮಾಡಿ, ತನ್ನ ಬದುಕು ಸಾರ್ಥಕ ಮಾಡಿಕೊಳ್ಳಬೇಕು. ಈ ದಿಶೆಯಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಉತ್ತಮ ರೀತಿಯಲ್ಲಿ ಸಮಾಜ ಸೇವಾ ಕಾರ್ಯ ಮಾಡುತ್ತಿರುವುದು ಅತ್ಯಂತ ಶ್ಲಾಘನೀಯವಾಗಿದೆ ಎಂದರು.
ಕದಳಿ ಮಹಿಳಾ ವೇದಿಕೆ ಜಿಲ್ಲಾಧ್ಯಕ್ಷೆ ನಿರ್ಮಲಾ ಬಳ್ಳೊಳ್ಳಿ ಹಾಗೂ ಕಂಪ್ಯೂಟರ್ ಶಿಕ್ಷಣ ತಜ್ಞ ಮಂಜುನಾಥ್ ಉಲ್ಲತಿ ಮಾತನಾಡಿದರು.ಪ್ರಸಕ್ತ ಸಾಲಿನ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಉಮಾ ಮಹೇಶ್ ತಂಬ್ರಳ್ಳಿ ಮಾತನಾಡಿದರು.
ನೂತನ ಪದಾಧಿಕಾರಿಗಳಿಗೆ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಕೊಪ್ಪಳ ಇನ್ನರ್‌ವಿಲ್ ಕ್ಲಬ್ ನೂತನ ಪದಾಧಿಕಾರಿ ಉಪಾಧ್ಯಕ್ಷೆ ಮಧು ಶೆಟ್ಟರ್, ಕಾರ್ಯದರ್ಶಿ ಮೀನಾಕ್ಷಿ ಬಣ್ಣದ ಬಾವಿ, ಖಜಾಂಚಿ ಆಶಾ ಗೌಡರ, ಐಎಸ್ಓ ಮಧು ನಿಲೋಗಲ್, ಎಡಿಟರ್ ನಾಗವೇಣಿ ಗರೂರು ಸೇರಿದಂತೆ ನಿಕಟ ಪೂರ್ವ ಅಧ್ಯಕ್ಷರಾದ ವಿಜಯಲಕ್ಷ್ಮಿ ಹಂಚಾಟೆ, ಹಿರಿಯ ವೈದ್ಯ ಡಾ. ರಾಧಾ ಕುಲಕರ್ಣಿ ಇದ್ದರು.
ನೀತಾ ತಂಬ್ರಳ್ಳಿ, ಪದ್ಮ ಜೈನ, ಶರಣಮ್ಮ ಪಾಟೀಲ, ತ್ರಿಶಾಲಾ ಪಾಟೀಲ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.