ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ

| Published : Nov 04 2023, 12:30 AM IST

ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ
Share this Article
  • FB
  • TW
  • Linkdin
  • Email

ಸಾರಾಂಶ

ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು.ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು.
ಪಠ್ಯೇತರ ಕಾರ್ಯಚಟುವಟಿಕೆ ಉದ್ಘಾಟನೆಯಲ್ಲಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಎಂ.ಎಸ್.ಸುಧಾದೇವಿ ಕನ್ನಡಪ್ರಭ ವಾರ್ತೆ ಚಿತ್ರದುರ್ಗ ಶಿಕ್ಷಣದಿಂದ ಮಾತ್ರ ಸಾಮಾಜಿಕ ಸ್ಥಿತಿಗತಿ ಬದಲಾವಣೆ ಸಾಧ್ಯ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎಸ್. ಸುಧಾದೇವಿ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ ದಾವಣಗೆರೆ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಐಕ್ಯೂಎಸಿ ಸಹಯೋಗದಲ್ಲಿ 2023-24ನೇ ಸಾಲಿನ ಪಠ್ಯೇತರ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿಕ್ಷಕರು ಉಪನ್ಯಾಸ ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಯಾವ ರೀತಿಯಾಗಿ ಸಮಾಜದಲ್ಲಿ ಬದುಕಬೇಕು ಎಂಬ ನೀತಿ ಪಾಠ ಹೇಳಬೇಕು ಎಂದರು. ವಿದ್ಯಾರ್ಥಿಗಳು ಸರ್ಕಾರದ ವಿವಿಧ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಉತ್ತಮ ವಿದ್ಯಾರ್ಥಿಯಾಗಿ ಗುರುತಿಸಿಕೊಂಡು ಕಾಲೇಜಿಗೆ ಹಾಗೂ ತಂದೆ-ತಾಯಿಗಳಿಗೆ ಕೀರ್ತಿ ತರಬೇಕು. ವಿವಿಧ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚು ಸಾಧನೆ ಮಾಡಿದ್ದಾರೆ. ಅದೇ ರೀತಿಯಲ್ಲಿ ನೀವು ಮುಂದುವರೆಯುವಂತೆ ಸಲಹೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಗುಡ್ಡದೇಶ್ವರಪ್ಪ ಮಾತನಾಡಿ, ಶಿಕ್ಷಣ ಹಾಗೂ ಜ್ಞಾನ ಪ್ರಪಂಚವನ್ನು ಆಳುತ್ತದೆ. ಬಡತನ, ಮೂಢನಂಬಿಕೆ, ಅಸಮಾನತೆಯಿಂದ ಹೊರಬರಲು ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಈ ಹಿನ್ನೆಲೆ ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮವಾದ ಶಿಕ್ಷಣ ಪಡೆದುಕೊಳ್ಳಬೇಕು ಹಾಗೂ ಉನ್ನತ ಸ್ಥಾನ ಅಲಂಕರಿಸಬೇಕು ಎಂದರು. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಶಿಕ್ಷಣ, ಉತ್ತಮ ಹಾಸ್ಟೆಲ್ ಸೌಲಭ್ಯ, ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು ಅದನ್ನು ಬಳಸಿಕೊಳ್ಳ ಬೇಕು. ನಿರಂತರ ಪಾಠ ಪ್ರವಾಚನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಹೊರಹಾಕಬೇಕು. ದುಶ್ಚಟ ಹಾಗೂ ಮೊಬೈಲ್‍ನಿಂದ ದೂರ ಉಳಿದರೆ ಸದೃಢವಾದ ರಾಷ್ಟ್ರ ಕಟ್ಟುವುದರ ಜೊತೆಗೆ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಡಿ.ಓ ಸಿದ್ದಪ್ಪ ಪ್ರಾಸ್ತವಿಕ ಮಾತನಾಡಿ, ಚಿತ್ರದುರ್ಗ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕರ್ನಾಟಕದಲ್ಲಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಾಲೇಜಿನಲ್ಲಿ ಈ ವರ್ಷ ಪಠ್ಯೇತರ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಚಟುವಟಿಕೆಗಳಲ್ಲಿ ಭಾಗವಹಿಸಿ ಸೌಲಭ್ಯ ಪಡೆದುಕೊಳ್ಳಬೇಕು. ಇದರ ಜೊತೆಗೆ ಈ ಬಾರಿ ವಾರ್ಷಿಕ ಶಿಬಿರ ಹಮ್ಮಿಕೊಳ್ಳಲಾಗುವುದು ಹಾಗೂ ಅಂತಿಮ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ ಆಯೋಜನೆ ಮತ್ತು ವಾರ್ಷಿಕ ಸಂಚಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಪಠ್ಯೇತರ ಕಾರ್ಯ ಚಟುವಟಿಕೆಗಳ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಜರುಗಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸಿ.ಚನ್ನಕೇಶವ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಲೀಲಾವತಿ, ಆಂಗ್ಲ ಭಾಷೆ ವಿಭಾಗದ ಮುಖ್ಯಸ್ಥ ಮಧುಸೂದನ್, ಐಕ್ಯೂಎಸಿ ಸಂಯೋಜಕ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶಿವಣ್ಣ, ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಗಿರೀಶ್, ಶಕುಂತಲಾ, ಗ್ರಂಥಪಾಲಕ ಕುಮಾರಸ್ವಾಮಿ, ದೈಹಿಕ ವಿಭಾಗದ ಪ್ರಾಧ್ಯಾಪಕ ಶಿವಪ್ರಸಾದ್ ಸೇರಿ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.