ಸಾರಾಂಶ
ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ.
ಹೊನ್ನಾವರ: ಪಟ್ಟಣದ ರೋಟರಿ ಸಭಾಭವನದಲ್ಲಿ ತಾಲೂಕಿನ ರೋಟರಿ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಉದ್ದೇಶಿಸಿ ರೋಟರಿ ಕ್ಲಬ್ ಅಧ್ಯಕ್ಷ ಸೂರ್ಯಕಾಂತ ಸಾರಂಗ ಮಾತನಾಡಿ, ರೋಟರಿ ಕ್ಲಬ್ ಶೈಕ್ಷಣಿಕ, ಆರೋಗ್ಯ, ಕ್ರೀಡೆ ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಳ್ಳುತ್ತಿದೆ. ನಾವು ಆಯೋಜಿಸುವ ಎಲ್ಲ ಕಾರ್ಯಕ್ರಮವನ್ನು ಜನರಿಗೆ ತಲುಪಿಸುವ ಕಾರ್ಯ ಪತ್ರಕರ್ತರು ಮಾಡುತ್ತಿದ್ದಾರೆ. ಪ್ರತಿವರ್ಷದಂತೆ ಎಲ್ಲ ಪತ್ರಕರ್ತರನ್ನು ಆಮಂತ್ರಿಸಿ ಅವರ ಸೇವೆ ಗುರುತಿಸುವ ಕಾರ್ಯ ರೋಟರಿ ಕ್ಲಬ್ ಮಾಡುತ್ತಿದೆ ಎಂದರು.ಹಿರಿಯ ಪತ್ರಕರ್ತ ಜಿ.ಯು. ಭಟ್ ಮಾತನಾಡಿ, ರೋಟರಿ ಕ್ಲಬ್ ಪತ್ರಕರ್ತರನ್ನು ಗುರುತಿಸಿ ಯಾವುದೇ ಸ್ವಾರ್ಥವಿಲ್ಲದೇ ಸನ್ಮಾನಿಸಿ ಗೌರವಿಸುವ ಕಾರ್ಯ ಮಾಡುತ್ತಿದೆ ಎಂದರು.
ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಸತೀಶ ತಾಂಡೇಲ್ ಮಾತನಾಡಿ, ಸಮಾಜಮುಖಿ ಅನೇಕ ಕಾರ್ಯದ ಮೂಲಕ ಜನಮನ್ನಣೆ ಪಡೆದಿರುವ ಹೊನ್ನಾವರ ರೋಟರಿ ಕ್ಲಬ್ ಪ್ರತಿವರ್ಷವೂ ಪತ್ರಿಕಾ ದಿನಾಚರಣೆಯ ಮೂಲಕ ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸುವ ಕಾರ್ಯ ಮಾಡುತ್ತಿದೆ ಎಂದರು.ಕಾರ್ಯಕ್ರಮದ ಇವೆಂಟ್ ಚೇರಮನ್ ನಾರಾಯಣ ಯಾಜಿ ಮಾತನಾಡಿದರು. ಕಾರ್ಯದರ್ಶಿ ಎಂ.ಎಂ. ಹೆಗಡೆ, ಖಜಾಂಚಿ ಎಸ್.ಎನ್. ಹೆಗಡೆ ರೋಟರಿ ಸದಸ್ಯರು, ಪತ್ರಕರ್ತರು ಇದ್ದರು. ದಿನೇಶ ಕಾಮತ್ ಕಾರ್ಯಕ್ರಮ ನಿರ್ವಹಿಸಿದರು.