ಇಂದು ಮಹಿಳೆಯರು ರಾಷ್ಟ್ರಪತಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದರು. ಮಹಿಳೆಯರು ಕುಟುಂಬದ ಜವಾಬ್ದಾರಿಯ ಜತೆಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಹೊಸ ಜವಾಬ್ದಾರಿಗಳನ್ನು ಸ್ವೀಕರಿಸುವ ಧೈರ್ಯ ಬೆಳೆಸಿಕೊಳ್ಳಬೇಕು, ಮನಸ್ಸು ಮಾಡಿದರೆ ಕುಟುಂಬದಿಂದ ಹಿಡಿದು ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ರಾಜ್ಯದ ಆಡಳಿತದವರೆಗೂ ಬದಲಾವಣೆ ತರುವ ಶಕ್ತಿ ಹೊಂದಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಮಹಿಳೆಯರ ಆತ್ಮವಿಶ್ವಾಸ, ಮನೋಶಕ್ತಿ ಮತ್ತು ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲು ಸಾಧ್ಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬ್ರೈನ್ ಎಕ್ಸ್ ಯೋಗ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ತ್ರೀಶಕ್ತಿ ಮನೋಶಕ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರ ಸ್ವಾಭಿಮಾನ ಮತ್ತು ಘನತೆಯ ಬದುಕಿಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಗೌರವ ದೊರಕಿಸಿಕೊಡುವಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆ ಮಹತ್ವದ್ದಾಗಿದೆ. ಇಂದು ಮಹಿಳೆಯರು ರಾಷ್ಟ್ರಪತಿ ಸೇರಿದಂತೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸುತ್ತಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ ಎಂದರು. ಮಹಿಳೆಯರು ಕುಟುಂಬದ ಜವಾಬ್ದಾರಿಯ ಜತೆಗೆ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆತ್ಮವಿಶ್ವಾಸದಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಹೊಸ ಜವಾಬ್ದಾರಿಗಳನ್ನು ಸ್ವೀಕರಿಸುವ ಧೈರ್ಯ ಬೆಳೆಸಿಕೊಳ್ಳಬೇಕು, ಮನಸ್ಸು ಮಾಡಿದರೆ ಕುಟುಂಬದಿಂದ ಹಿಡಿದು ಗ್ರಾಮ ಪಂಚಾಯಿತಿ, ತಾಲೂಕು ಹಾಗೂ ರಾಜ್ಯದ ಆಡಳಿತದವರೆಗೂ ಬದಲಾವಣೆ ತರುವ ಶಕ್ತಿ ಹೊಂದಿದ್ದಾರೆ ಎಂದರು.
ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳ ಸಾಮರ್ಥ್ಯ ಮತ್ತು ಆರ್ಥಿಕ ಸ್ವಾವಲಂಬನೆಯಿಂದ ಗ್ರಾಮೀಣ ಪ್ರದೇಶದಲ್ಲಿ ಮಹತ್ವದ ಬದಲಾವಣೆಗಳಾಗಿವೆ. ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶ ದೊರೆತಿದೆ ಎಂದು ಹೇಳಿದರು. ಶಿಬಿರಾರ್ಥಿ ಸೌಮ್ಯ ಮಾತನಾಡಿ, ಮಹಿಳೆಯರು ಕುಟುಂಬದ ಜವಾಬ್ದಾರಿಗಳ ನಡುವೆ ತಮ್ಮ ವೈಯಕ್ತಿಕ ಆಸಕ್ತಿ, ಹವ್ಯಾಸ ಮತ್ತು ಸಾಮರ್ಥ್ಯಗಳನ್ನು ಕಡೆಗಣಿಸಬಾರದು. ಕುಟುಂಬಕ್ಕಾಗಿ ದುಡಿಯುವ ಮಹಿಳೆಯರು ತಮ್ಮನ್ನು ತಾವು ಗುರುತಿಸಿಕೊಳ್ಳುವುದಕ್ಕೂ ಸಮಯ ಮೀಸಲಿಡಬೇಕು. ಇಂತಹ ಕಾರ್ಯಕ್ರಮಗಳು ಮಹಿಳೆಯರಲ್ಲಿ ಸಕಾರಾತ್ಮಕ ಚಿಂತನೆ ಮತ್ತು ಆತ್ಮಗೌರವ ಬೆಳೆಸಲು ಸಹಕಾರಿಯಾಗಿವೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹರೀಶ್, ಪಿಡಿಒ ಗಿರೀಶ್, ಬ್ರೈನ್ ಎಕ್ಸ್ ಯೋಗ ಸಂಸ್ಥೆಯ ರಘು ಮತ್ತು ರೇಣುಕಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
===ಫೋಟೋ:
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬ್ರೈನ್ ಎಕ್ಸ್ ಯೋಗ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ತ್ರೀಶಕ್ತಿ ಮನೋಶಕ್ತಿ ಕಾರ್ಯಕ್ರಮದಲ್ಲಿ