ಸಾರಾಂಶ
ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಕ್ತಶೇಷ್ಠ ಕನಕದಾಸರ ೫೩೭ನೇ ಜಯಂತಿ ಸಮಾರಂಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಭಕ್ತ ಶ್ರೇಷ್ಠ ಕನಕದಾಸ’ರ ೫೩೭ನೇ ಜಯಂತಿ ಕಾರ್ಯಕ್ರಮ ನಡೆಯಿತು.ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಕನಕದಾಸರು ಕುಲಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಎಂದು ಜಾತಿಯ ವ್ಯವಸ್ಥೆಯನ್ನು ಪ್ರಶ್ನಿಸಿದ್ದರು. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಯತ್ನಿಸಿದ್ದರು ಎಂದು ಹೇಳಿದರು.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ಸಮಾಜ ಸುಧಾರಣೆಗೆ ದುಡಿದ ಮಹಾನ್ ವ್ಯಕ್ತಿಗಳನ್ನು ಒಂದು ಸಮುದಾಯಕ್ಕೆ ಸೀಮಿತವಾಗಿಸಬಾರದು. ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಂಡು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಕನಕದಾಸರು ರಚಿಸಿರುವ ಕೃತಿಗಳನ್ನು ಓದುವ ಮೂಲಕ ಕನಕದಾಸರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಆರ್. ಮಹದೇವ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎ.ಎಸ್.ಗುರುಸ್ವಾಮಿ, ಜಿಪಂ ಮಾಜಿ ಸದಸ್ಯ ಕೆರಹಳ್ಳಿ ನವೀನ್, ಪದ್ಮಪುರುಷೋತ್ತಮ್, ತಾಪಂ ಮಾಜಿಸದಸ್ಯ ಕುಮಾರ್‌ನಾಯಕ್, ಮಹದೇವಶೆಟ್ಟಿ, ಎಪಿಎಂಸಿ ಅದ್ಯಕ್ಷ ಸೋಮೇಶ್, ಕಾಗಲವಾಡಿ ಚಂದ್ರು, ನಸ್ರುಲ್ಲಾಖಾನ್, ಬಗರ್‌ಹುಕುಂ ಸಾಗುವಳಿ ಸಮಿತಿ ಸದಸ್ಯ ರವಿ, ಅಯೂಬ್ ಖಾನ್, ಆರ್.ಉಮೇಶ್, ನಗರಸಭೆ ಮಾಜಿ ಸದಸ್ಯ ಪುಟ್ಟಸ್ವಾಮಿ, ಅಪ್ಸರ್ ಅಹಮದ್, ಜಿ.ಡಿ.ಪ್ರಕಾಶ್, ಮರಿಯಾಲಹುಂಡಿ ಕುಮಾರ್, ಪಟೇಲ್ ಮಹದೇವಸ್ವಾಮಿ, ಸೇವಾದಳ ನಾಗರಾಜು, ಶೇಷಣ್ಣ. ಜಯರಾಜ್, ಸೋಮಣ್ಣ, ಸ್ವಾಮಿ, ರವಿಗೌಡ, ಕರಿನಂಜನಪುರ ಸ್ವಾಮಿ, ಅಶೋಕ್, ದ್ವಾರ್ಕಿ ಪಕ್ಷದ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.