ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನ ಅಗತ್ಯ : ಡಾ. ಗಿರಿಧರ ರಾವ್

| Published : Mar 23 2024, 01:06 AM IST

ಆಧುನಿಕ ಸಮಾಜದಲ್ಲಿ ಸಮಾಜಶಾಸ್ತ್ರೀಯ ಅಧ್ಯಯನ ಅಗತ್ಯ : ಡಾ. ಗಿರಿಧರ ರಾವ್
Share this Article
  • FB
  • TW
  • Linkdin
  • Email

ಸಾರಾಂಶ

ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ - 2020 ಇದರ ಮಂಗಳೂರು ವಿ.ವಿ. ಕಾಲೇಜುಗಳ 6ನೇ ಸೆಮಿಸ್ಟರ್‌ನ ಪಠ್ಯಕ್ರಮದ ಮಾಹಿತಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿಸಮಾಜ ಶಾಸ್ತ್ರವು ಸಮಾಜದ ವೈಜ್ಞಾನಿಕ ಅಧ್ಯಯನವಾಗಿದ್ದು, ಆಧುನಿಕತೆಯಿಂದಾಗಿ ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶಗಳನ್ನು ಅರ್ಥೈಸಿಕೊಂಡು ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯವನ್ನು ನಿರ್ವಹಿಸುತ್ತವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಡಾ. ಗಿರಿಧರ ರಾವ್ ಎಂ.ಎಸ್. ಹೇಳಿದರು.ಅವರು ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ - 2020 ಇದರ ಮಂಗಳೂರು ವಿ.ವಿ. ಕಾಲೇಜುಗಳ 6ನೇ ಸೆಮಿಸ್ಟರ್‌ನ ಪಠ್ಯಕ್ರಮದ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಈ ಕಾರ್ಯಾಗಾರದಲ್ಲಿ ಬ್ರಹ್ಮಾವರ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವೈ. ರವೀಂದ್ರನಾಥ ರಾವ್, ಪಡುಕರೆಯ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುನೀತಾ ವಿ. ಹಾಗೂ ಮಂಗಳೂರು ಫಾದರ್ ಮುಲ್ಲರ್ ಸಂಸ್ಥೆಯ ಪ್ರಾಧ್ಯಾಪಕಿ ಡಾ. ವೀಣಾ ಮನೋಜ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ವಿನಯ್ ರಜತ್ ಡಿ., ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ, ಕಾರ್ಯಾಗಾರದ ಸಂಚಾಲಕ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ಪುತ್ತೂರು ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಶ್ರೀಮತಿ ವಿದ್ಯಾ ಎಸ್. ಕಾರ್ಯಕ್ರಮ ನಿರ್ವಹಿಸಿದರು.