ಸಾಫ್ಟ್ ವೇರ್ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ

| Published : Nov 13 2024, 12:09 AM IST

ಸಾರಾಂಶ

ಬೆಂಗಳೂರಿನಲ್ಲಿ ಅಕ್ಸೆನ್ಚರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಹಲವು ದಿನಗಳಿಂದ ವರ್ಕ್‌ ಫ್ರಂ ಹೋಂ ರೀತಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಶ್ರೀರಂಗಪಟ್ಟಣ: ಸಾಫ್ಟ್ ವೇರ್ ಉದ್ಯೋಗಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಆರ್ ಎಸ್ ನ ನಾರ್ತ್ ಬ್ಯಾಂಕ್ ದ್ವಾರದಲ್ಲಿ ಸೋಮವಾರ ಸಂಜೆ ನಡೆದಿದೆ. ಗ್ರಾಮದ ನರಸಿಂಹರ ಪುತ್ರಿ ಕುಮಾರಿ (28) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನಲ್ಲಿ ಅಕ್ಸೆನ್ಚರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಹಲವು ದಿನಗಳಿಂದ ವರ್ಕ್‌ ಫ್ರಂ ಹೋಂ ರೀತಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಇತ್ತೀಚೆಗೆ ತಾನೇ ನಿರ್ಮಿಸಿದ್ದ ಮನೆ ಮೊದಲ ಮಹಡಿಯಲ್ಲಿನ ರೂಂನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತಳ ಸಹೋದರ ಚೆಲುವರಾಜು ನೀಡಿದ ದೂರಿನ ಮೇರೆಗೆ ಕೆಆರ್‌ಎಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಮೈಸೂರು ಕೆ.ಆರ್.ಆಸ್ಪತ್ರೆ ಶವಗಾರದಲ್ಲಿರಿಸಲಾಗಿದೆ.