ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ನುಡಿದರು.

ಕನ್ನಡಪ್ರಭ ವಾರ್ತೆ ಶಿರಾ

ಮಳೆಯ ಅಭಾವದಿಂದ ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಅನ್ನದಾತ ಸಂಕಷ್ಟದಲ್ಲಿದ್ದಾನೆ, ಅನ್ನದಾತನಿಗೆ ಆತ್ಮವಿಶ್ವಾಸ ಮೂಡಿಸುವ ಅವಶ್ಯಕತೆ ಇದ್ದು ಸರ್ಕಾರ ರೈತ ಪರ ಯೋಜನೆಗಳನ್ನು ರೂಪಿಸಿ, ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಂಜಾವಧೂತ ಸ್ವಾಮೀಜಿ ನುಡಿದರು.

ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ೮೦ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ವಸಂತಕುಮಾರ್ ಉಪ ಪ್ರಾಂಶುಪಾಲ ವಿ, ಗಂಗಾಧರ್, ಶ್ರೀ ನಂಜಾವಧೂತ ಸ್ವಾಮೀಜಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೊಸಮನೆ ರಂಗನಾಥ್, ವಿ., ವಾನಂದ, ರಾಜಣ್ಣ, ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ನಾದೂರು ಕೆಂಚಪ್ಪ, ಶ್ರೀಮಠದ ಪಿ ಆರ್ ಒ ತಮ್ಮಣ್ಣ, ಮುಖಂಡರಾದ ಆರ್.ಕೆ.ಮಾರುತಿ, ಚಂದ್ರಶೇಖರ್, ಉಪನ್ಯಾಸಕ ರಂಗಪ್ಪ, ಶಿಕ್ಷಕ ರಾಮಣ್ಣ, ದಿವ್ಯಶ್ರೀ, ಶಂಕರಪ್ಪ, ಪ್ರಕಾಶ್ ಸೇರಿದಂತೆ ಹಲವರು ಹಾಜರಿದ್ದರು.