ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಿ: ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೌರಮ್ಮ

| Published : Sep 04 2024, 01:48 AM IST

ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಿ: ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೌರಮ್ಮ
Share this Article
  • FB
  • TW
  • Linkdin
  • Email

ಸಾರಾಂಶ

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ನೀರಿಗೆ ತೊಂದರೆಯಾಗದಂತೆ ಶಾಶ್ವತವಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು. ಕನಕಪುರದ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕನಕಪುರ

ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ನೀರಿಗೆ ತೊಂದರೆಯಾಗದಂತೆ ಶಾಶ್ವತವಾದ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು.

ಅಳ್ಳಿಮಾರನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೌರಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ದಿಲೀಪ್, ಮಂಜು ಸೇರಿದಂತೆ ಹಲವು ಸದಸ್ಯರು ಮಾತನಾಡಿದರು. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಜನರಿಗೆ ತೊಂದರೆಯಾಗದಂತೆ ರೈತರ ಬೊರ್ ವೆಲ್‌ಗಳಿಂದ ನೀರು ಪೂರೈಕೆ ಮಾಡುತ್ತಿದ್ದಿರಿ ಆದರೆ ಅದು ಶಾಶ್ವತವಲ್ಲ ಹೊಸದಾಗಿ ಬೋರ್‌ವೆಲ್‌ ಗಳನ್ನು ತೆಗೆದು ಮುಂದೆ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಪಂಚಾಯತಿ ಪ್ರಭಾರ ಅಭಿವೃದ್ಧಿ ಅಧಿಕಾರಿ ಟಿ..ಕೃಷ್ಣ ಮಾತನಾಡಿ, ಕಳೆದ ವರ್ಷ ಮಳೆ ಇಲ್ಲದೆ ಬರಗಾಲ ಮತ್ತು ವಿಪರೀತವಾದ ತಾಪಮಾನದಿಂದ ಕೆರೆ ಕಟ್ಟೆಗಳಲ್ಲಿ ನೀರಿ ಲ್ಲದೆ ಬತ್ತಿಹೋಗಿವೆ ಈ ವರ್ಷವೂ ಸಹ ನಿರೀಕ್ಷೆಯಂತೆ ಮುಂಗಾರು ಮಳೆಯಾಗಿಲ್ಲ ತಾಲೂಕಿನ ಮಳೆಯ ಪ್ರಮಾಣ ಕಡಿಮೆಯಾಗಿರುವುದು ಜೊತೆಗೆ ಕೆರೆಕಟ್ಟೆಗಳಲ್ಲಿ ನೀರಿನ ಕೊರತೆಯಿರುವುದರಿಂದ ಅಂತರ್ಜಲ ಕುಗ್ಗಿ ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ಬರಿದಾಗಿವೆ, ಜಿಲ್ಲಾ ಪಂಚಾಯತಿಯಿಂದ ಬೋರ್‌ವೆಲ್ ಕೊರೆಸುವಂತೆ ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಈಗಾಗಲೇ ಡೆಂಘೀ ಜ್ವರದ ಹಿನ್ನೆಲೆಯಲ್ಲಿ ಪ್ರಕರಣವನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಿ ಕೊಳಚೆ ನೀರು ನಿಲ್ಲದಂತೆ ಸ್ವಚ್ಛವಾಗಿಟ್ಟುಕೊಳ್ಳಬೇಕು,ಮಕ್ಕಳ ಆರೋಗ್ಯದ ಮೇಲೆ ನಿಗಾವಸಬೇಕು,ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ತಿಳಿಸಿದರು.

ಗ್ರಾಪಂ ಉಪಾಧ್ಯಕ್ಷೆ ಸುಜಾತ, ತಮ್ಮಣ್ಣಿ, ಸದಸ್ಯರಾದ ರಾಜುಗಾಂಧಿ, ದಿಲೀಪ್, ಲಕ್ಷ್ಮಮ್ಮ, ದೇವರಾಜು, ಕಿರಣ್, ಸುಧಾರಾಣಿ,ಎಸ್.ಡಿ.ಎ. ಸುಮ ಹಾಗೂ ಸಿಬ್ಬಂಧಿಗಳು ಉಪಸ್ಥಿತರಿದ್ದರು.