ಕುಡಿಯುವ ನೀರಿನ ಸಮಸ್ಯೆಶೀಘ್ರ ಬಗೆಹರಿಸಿ: ಜಿಲ್ಲಾಧಿಕಾರಿ ಸತ್ಯಭಾಮ

| Published : May 04 2024, 12:35 AM IST

ಕುಡಿಯುವ ನೀರಿನ ಸಮಸ್ಯೆಶೀಘ್ರ ಬಗೆಹರಿಸಿ: ಜಿಲ್ಲಾಧಿಕಾರಿ ಸತ್ಯಭಾಮ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಹಾಗೂ ನಿಗದಿತ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಹಾಗೂ ನಿಗದಿತ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಸಿ ಸತ್ಯಭಾಮ ತಿಳಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷತೆ ವಹಿಸಿ ಜಿಲ್ಲೆಯಲ್ಲಿ ಬರ ಪರಸ್ಥಿತಿ ನಿವಾರ್ಹಣೆ ಕುರಿತಂತೆ ಸಭೆ ನಡೆಸಿ ಮಾತನಾಡಿ, ಕುಡಿಯುವ ನೀರಿನ ಟ್ಯಾಂಕರ್ ಗಳು ಜಿಪಿಎಸ್ ಅಳವಡಿಸಿ ನೀರು ಸರಬರಾಜುಮಾಡಬೇಕು ಬಿಸಿಲಿನ ತಾಪಮಾನ ಹೆಚ್ಚಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಅರಿವು ಮೂಡಿಸುವ ಕೆಲಸವಾಗಬೇಕು ಹಾಗೂ ಪತ್ರಿಕೆಗಳನ್ನು ಹೆಚ್ಚಿನ ಪ್ರಚಾರವನ್ನು ನೀಡಬೇಕು ಎಂದರು.

ಜಾನುವಾರುಗಳ ಮೇವಿಗೆ ಹಾಗೂ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಬೇಕು ಹಾಗೂ ಜಿಲ್ಲೆಯಿಂದ ಜಿಲ್ಲೆಗೆ ಯಾವುದೇ ಮೇವು ಸರಬರಾಜು ಆಗಬಾರದು.ಪಕ್ಷಿಗಳಿಗೆ ಮನೆಯ ಮೇಲೆ ಕುಡಿಯುವ ನೀರಿನ ಇಡಲು ಆಯಾ ಗ್ರಾಪಂಗಳಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಎಲ್ಲೆಲ್ಲಿ ಕುಡಿಯುವ ನೀರಿನ ತೊಡರೆಯದ ಗ್ರಾಪಂ ಹಾಗೂ ನಗರ ಸಭೆಯ ಮುಖ್ಯಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ನಿರ್ಲಕ್ಷ್ಯ ತೋರಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಪಂ ಸಿಇಒ ಪೂರ್ಣಿಮಾ ಮಾತನಾಡಿ, ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ ತಾಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಎದುರಾಗಬಹುದಾಗ ಗ್ರಾಮಗಳನ್ನು ಗುರುತಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು. ಎಡಿಸಿ ಕೆ. ಟಿ ಶಾಂತಲಾ ಮಾತನಾಡಿ, ಯಾವುದೇ ರೀತಿಯ ಕುಡಿಯುವ ನೀರನ್ನು ಇತರೆ ಉಪಯೋಗಕ್ಕೆ ಬಳಸಿಕೊಳ್ಳುತ್ತಿದ್ದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳವಂತೆ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಸುಲೋಚನಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.