ತುಮಕೂರು: ಗ್ರಾಮಾಂತರ ಕ್ಷೇತ್ರದ ಹೊನಸಿಗೆರೆ ಸರ್ಕಾರಿ ಶಾಲೆ ಜಾಗದ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ, ಜಾಗವನ್ನು ಶಾಲೆ ಹೆಸರಿಗೆಖಾತೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಶಾಸಕ ಬಿ.ಸುರೇಶ್‌ಗೌಡರು ಸೂಚಿಸಿದರು.
ತುಮಕೂರು: ಗ್ರಾಮಾಂತರ ಕ್ಷೇತ್ರದ ಹೊನಸಿಗೆರೆ ಸರ್ಕಾರಿ ಶಾಲೆ ಜಾಗದ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ, ಜಾಗವನ್ನು ಶಾಲೆ ಹೆಸರಿಗೆಖಾತೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಶಾಸಕ ಬಿ.ಸುರೇಶ್‌ಗೌಡರು ಸೂಚಿಸಿದರು.
ಸರ್ವೆ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಹೊನಸಗೆರೆ ಶಾಲಾ ಜಾಗಕ್ಕೆ ಭೇಟಿ ನೀಡಿದ್ದ ಶಾಸಕರು, ಜಾಗದ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಮಸ್ಯೆ ಬಗೆಹರಿಸಲುಕ್ರಮ ತೆಗೆದುಕೊಳ್ಳುವಂತೆ ತಿಳಿಸಿದರು. ನಂತರ ಶಾಸಕ ಸುರೇಶ್‌ಗೌಡರು ಹೊಳಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ ಸಭೆ ನಡೆಸಿ ಶಾಲೆಯ ಚಟುವಟಿಕೆ ಪರಿಶೀಲಿಸಿದರು, ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಭರವಸೆ ನೀಡಿದರು. ಈ ವೇಳೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಎ.ಆಂಜನಪ್ಪ ಮೊದಲಾದವರಿದ್ದರು.