ಸಾರಾಂಶ
ಹಲಗೂರು:
ಜನಪರ ಹೋರಾಟಗಳ ಮೂಲಕ ಸಾಮಾಜಿಕ ಸಮಸ್ಯೆ ಬಗೆಹರಿಸಿಕೊಳ್ಳಲು ರೈತರು, ಕೂಲಿಕಾರರು ಮತ್ತು ಸಾರ್ವಜನಿಕರು ಮುಂದಾಗಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಪುಟ್ಟಮಾದು ಕರೆ ನೀಡಿದರು.ಕರ್ನಾಟಕ ಪಬ್ಲಿಕ್ ಸ್ಕೂಲ್ ಅವರಣದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಆಯೋಜಿಸಿದ್ದ ಹಲಗೂರು ವಲಯ ಸಮ್ಮೇಳನದಲ್ಲಿ ಮಾತನಾಡಿ, ಗ್ರಾಮಗಳಿಗೆ ಅಗತ್ಯವಿರುವ ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಸ್ಮಶಾನಕ್ಕೆ ಮೂಲ ಸೌಕರ್ಯ ಒದಗಿಸಲು ಸ್ಥಳೀಯ ಆಡಳಿತ ಅಧಿಕಾರಿಗಳನ್ನು ಪ್ರಶ್ನಿಸುವ ಪರಿಪಾಠ ಬೆಳೆಸಿಕೊಂಡರೇ ಸಮಸ್ಯೆ ಬಗೆಹರಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಗ್ರಾಮೀಣ ಪ್ರದೇಶದ ಬಡ ಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಕೆಲವು ಮೈಕ್ರೊ ಫೈನಾನ್ಸ್ ಕಂಪನಿಗಳಿಂದ ಸಾಲ ಪಡೆದುಕೊಂಡು ಸಾಲ ಮರುಪಾವತಿ ಸಾಧ್ಯವಾಗದೇ ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗುತ್ತಿರುವುದು ತುಂಬಾ ನೋವಿನ ವಿಷಯ ಎಂದರು.ಪ್ರತಿಯೊಬ್ಬ ಜೀವ ಅಮೂಲ್ಯ. ಭಾದಿತರು ಸಾವಿಗೆ ಶರಣಾಗುವುದನ್ನು ಬಿಟ್ಟು ನಮ್ಮ ಗಮನಕ್ಕೆ ತಂದರೇ ಸಮಸ್ಯೆ ಬಗೆಹರಿಸಲು ಸಂಘಟನೆ ಮೂಲಕ ಶ್ರಮಿಸಲಾಗುವುದು ಎಂದರು.
ಈ ವೇಳೆ ಕೃಷಿ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ಬಿ.ಎಂ.ಶಿವಮಲ್ಲಯ್ಯ, ಹಲಗೂರು ವಲಯ ಸಮಿತಿ ಅಧ್ಯಕ್ಷೆ ಕುಂತೂರು ಲಕ್ಷ್ಮೀ, ಕಾರ್ಯದರ್ಶಿ ಗೊಲ್ಲರಹಳ್ಳಿ ಲಕ್ಷ್ಮೀ, ಮುಖಂಡರಾದ ರಾಮಣ್ಣ, ಜ್ಯೋತಿ, ರಾಜಮ್ಮ, ಸರೋಜಮ್ಮ ಸೇರಿದಂತೆ ಹಲವರು ಭಾಗವಹಿಸಿದ್ದರು.ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಮಂಡ್ಯಧರ್ಮಸ್ಥಳ ಗ್ರಾಮದ ಸುತ್ತಮುತ್ತ ನಡೆದಿದೆ ಎನ್ನಲಾದ ಮಹಿಳೆಯರ ಹತ್ಯೆ ಕುರಿತಂತೆ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ನೇಮಿಸಿರುವುದು ಸ್ವಾಗತಾರ್ಹ. ಹೈಕೋರ್ಟ್‌ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವಂತೆ ದಸಂಸ (ಪ್ರೊ.ಬಿ.ಕೃಷ್ಣಪ್ಪ) ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಒತ್ತಾಯಿಸಿದರು.
ಅಮಾಯಕ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಗಳು ಬೆಳಕಿಗೆ ಬಂದರೂ ಸುಮೋಟೋ ಕ್ರಮ ವಹಿಸಲಾಗದ ರಾಜ್ಯ ಪೊಲೀಸ್ ವ್ಯವಸ್ಥೆ ಮತ್ತು ಸರ್ಕಾರ ಕೂಡ ಗಂಭೀರ ಕ್ರಮಕ್ಕೆ ಮುಂದಾಗದಿರುವುದು ಸಾಮಾಜಿಕ ಅನ್ಯಾಯದ ಪ್ರತೀಕವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.ಸರ್ಕಾರದ ಅಧೀನದಲ್ಲಿರುವ ತನಿಖಾ ತಂಡವಾದ ಎಸ್‌ಐಟಿ ಈ ಹಿಂದಿನ ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಕ್ಲೀನ್ ಚೀಟ್ ನೀಡಿತ್ತು. ಅದೇ ಮಾದರಿಯಲ್ಲಿ ಈ ತನಿಖೆಯೂ ನಡೆದರೆ ಪ್ರಯೋಜನವಿಲ್ಲ. ರಾಜ್ಯ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ ತಂಡ ತನಿಖೆ ನಡೆಸಬೇಕು. ಉಚ್ಛ ನ್ಯಾಯಾಲಯದ ನ್ಯಾಯಾಧೀಶರನ್ನು ಸರ್ಕಾರವೇ ಕೋರಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಬಿ.ಆನಂದ್, ಪುಟ್ಟಲಿಂಗಯ್‌ಯ, ಮುತ್ತುರಾಜು ಇದ್ದರು.